ಪ್ರತಿಭಟನೆಯಲ್ಲಿ ಮೃತಪಟ್ಟ ರೈತರಿಗೆ ಸ್ಮಾರಕ ನಿರ್ಮಾಣ

ಈ ಸುದ್ದಿಯನ್ನು ಶೇರ್ ಮಾಡಿ

ಗಾಜಿಯಾಬಾದ್,ಏ.7-ಕೇಂದ್ರದ ಮೂರು ಕೃಷಿ ನೀತಿ ವಿರೋಧಿಸಿ ನಡೆಸಲಾಗುತ್ತಿರುವ ಪ್ರತಿಭಟನೆಯಲ್ಲಿ ಮೃತಪಟ್ಟ ರೈತರ ಸ್ಮರಣಾರ್ಥ ಹುತಾತ್ಮ ಸ್ಮಾರಕ ನಿರ್ಮಿಸಲು ಬಿಕೆಯು ಸಂಘಟನೆ ತೀರ್ಮಾನಿಸಿದೆ. ಕೇಂದ್ರ ಸರ್ಕಾರದ ವಿರುದ್ಧ ತಿರುಗಿಬಿದ್ದು ರೈತರು ನಡೆಸುತ್ತಿರುವ ಹೋರಾಟದಲ್ಲಿ ಇದುವರೆಗೂ 320 ರೈತರು ಹುತಾತ್ಮರಾಗಿದ್ದು ಅವರ ಬಲಿದಾನದ ಸ್ಮರಣಾರ್ಥ ಸ್ಮಾರಕ ನಿರ್ಮಿಸಲಾಗುತ್ತಿದೆ ಎಂದು ಬಿಕೆಯು ಮುಖಂಡರು ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ರೈತರು ಮೃತಪಟ್ಟ ಸ್ಥಳದ ಮಣ್ಣನ್ನು ತಂದು ಸ್ಮಾರಕ ನಿರ್ಮಾಣಕ್ಕೆ ಬಳಕೆ ಮಾಡಿಕೊಳ್ಳಲಾಗಿದೆ. ಬಿಕೆಯು ಮುಖಂಡ ರಾಜೇಶ್ ಟಿಕಾಯತ್ ಹಾಗೂ ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರು ಸ್ಮಾರಕ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದಾರೆ. ನಂತರ ಎಲ್ಲ ಸ್ಮಾರಕಗಳನ್ನು ಶಾಶ್ವತವನ್ನಾಗಿಸುವ ಕಾಮಗಾರಿ ಆರಂಭಿಸಲಾಗುವುದು ಎಂದು ಬಿಕೆಯು ಮಾಧ್ಯಮ ವಕ್ತಾರ ಧರ್ಮೇಂದ್ರ ಮಲ್ಲಿಕ್ ತಿಳಿಸಿದ್ದಾರೆ.

Facebook Comments