ಕೊಹ್ಲಿ ಅಬ್ಬರಿಸದಿದ್ದರೆ ಭಾರತಕ್ಕೆ ಸೋಲು ಖಚಿತ

ಈ ಸುದ್ದಿಯನ್ನು ಶೇರ್ ಮಾಡಿ

ಮೊಲ್ಬೊರ್ನ್, ನ.24- ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅಬ್ಬರಿಸದಿದ್ದರೆ ಸೋಲು ಖಚಿತ ಎಂದು ವಿಶ್ವಕಪ್ ವಿಜೇತ ನಾಯಕ ಮೈಕಲ್ ಕ್ಲಾರ್ಕ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್‍ನ ನಂತರ ಕೊಹ್ಲಿ ಪಿತೃತ್ವ ರಜೆ ಪಡೆದಿರುವುದರಿಂದ ಆ ಟೆಸ್ಟ್ ಪಂದ್ಯವನ್ನು ಭಾರತ ತಂಡವು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದ್ದು ನಾಯಕ ಕೊಹ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿ ತಂಡಕ್ಕೆ ಗೆಲುವು ತಂದುಕೊಟ್ಟರೆ ಉಳಿದ ಪಂದ್ಯಗಳಲ್ಲಿ ಯುವ ಆಟಗಾರರು ಉತ್ತಮ ಪ್ರದರ್ಶನ ನೀಡಲು ಸಹಕಾರಿಯಾಗುತ್ತದೆ ಎಂದು ಕ್ಲಾರ್ಕ್ ಹೇಳಿದರು.

Facebook Comments