ಹಾಲಿನ ಉತ್ಪನ್ನ ಆಮದಿಗೆ ವಿಧಾನಸಭೆಯಲ್ಲಿ ವಿರೋಧ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.12- ಹಾಲಿನ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳಲು ಪಕ್ಷಭೇದ ಮರೆತು ವಿರೋಧ ವ್ಯಕ್ತಪಡಿಸಿದ ಪ್ರಸಂಗ ವಿಧಾನಸಭೆಯಲ್ಲಿಂದು ನಡೆಯಿತು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳ ಅನುದಾನ ಬೇಡಿಕೆಗಳ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದಾಗ, ಹಾಲು ಉತ್ಪಾದಕರಿಗೆ ನೀಡಲಾಗುತ್ತಿರುವ 5 ರೂ. ಪ್ರೋತ್ಸಾಹ ಧನವನ್ನು ನಿಲ್ಲಿಸಬೇಡಿ.

ಕಳೆದ ಸರ್ಕಾರ ಘೋಷಣೆ ಮಾಡಿದಂತೆ ಪ್ರತಿ ಲೀಟರ್‍ಗೆ 6 ರೂ. ಕೊಡಿ ಎಂದಾಗ, ಕಾಂಗ್ರೆಸ್ ಶಾಸಕ ಅಮರೇಗೌಡ ಭೈಯ್ಯಾಪುರ ಮಧ್ಯಪ್ರವೇಶಿಸಿ ಕೇಂದ್ರ ಸರ್ಕಾರ ಹಾಲಿನ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುವುದಾಗಿ ಪ್ರಸ್ತಾಪಿಸಿದೆ ಎಂದರು.

ಆಗ ಜೆಡಿಎಸ್‍ನ ವೆಂಕಟರಾವ್‍ನಾಡಗೌಡ ಅವರು, ಕರ್ನಾಟಕದಲ್ಲೇ ಹಾಲಿನ ಉತ್ಪಾದನೆ ಹೆಚ್ಚಾಗಿದೆ. ಹಾಲಿನ ಉತ್ಪಾದನೆಯಲ್ಲಿ ದೇಶದಲ್ಲೇ 2ನೇ ಸ್ಥಾನದಲ್ಲಿದ್ದೇವೆ. ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಬಿಜೆಪಿಯ ಸೋಮಶೇಖರ್‍ರೆಡ್ಡಿ ಮಾತನಾಡಿ, ರಾಜ್ಯದಲ್ಲಿ 80 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ.

ಕೇಂದ್ರ ಸರ್ಕಾರ 10 ಹಾಲಿನ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುವುದಾಗಿ ಹೇಳಿದೆ. ಹಾಲಿನ ಉತ್ಪನ್ನ ಆಮದು ಮಾಡಿಕೊಳ್ಳುವುದರಿಂದ ರಾಜ್ಯದಲ್ಲಿ ಸಂಕಷ್ಟ ಎದುರಾಗಲಿದೆ, ಹಾಲಿನ ಉತ್ಪಾದನೆಗಳನ್ನು ಯಾವುದೇ ಕಾರಣಕ್ಕೂ ಆಮದು ಮಾಡಿಕೊಳ್ಳುವುದು ಬೇಡ ಎಂದು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದರು.

Facebook Comments