ಗಣಿ ಮೇಲ್ಛಾವಣಿ ಕುಸಿದು ನಾಲ್ವರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಕೊಡೆರ್ಮಾ ,ಜ.23-ಜಾರ್ಖಂಡ್‍ನ ಕೊಡೆರ್ಮಾ ಜಿಲ್ಲೆಯ ಅಕ್ರಮ ಗಣಿಗಾರಿಕೆ ಗುಹೆಯ ಮೇಲ್ಛಾವಣಿ ಕುಸಿದು ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ. ಮೇಲ್ಛಾವಣಿ ಕುಸಿದಾಗ 6 ಮಂದಿ ಕಾರ್ಮಿಕರು ಸಿಲುಕಿಕೊಂಡಿದ್ದರು ಅವರಲ್ಲಿ ಇಬ್ಬರನ್ನು ರಕ್ಷಿಸಲಾಗಿದೆ. ಆದರೆ, ಉಳಿದ ನಾಲ್ವರು ಮೃತಪಟ್ಟಿದ್ದಾರೆ ಎಂದು ಡಿಸಿಪಿ ರಮೇಶ್ ಗೋಲಪ್ ತಿಳಿಸಿದ್ದಾರೆ.

ದಟ್ಟ ಅರಣ್ಯದ ನಡುವೆ ಕೆಲವರು ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದರು. ಅವಶೇಷಗಳಡಿ ಸಿಲುಕಿ ಸಾವನ್ನಪ್ಪಿರುವವರ ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ ಇಸ್ಲಾಂ ಮೈ ಎಂಬಾತನನ್ನು ಪೊಲೀಸರು ಬಂಧಿಸಿ ಮುಂದಿನ ಕ್ರಮ ಜರುಗಿಸಿದ್ದಾರೆ. ಭವಿಷ್ಯದಲ್ಲಿ ಇಂತಹ ದುರಂತಗಳು ಮರು ಕಳಿಸದಂತೆ ಎಲ್ಲಾ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದಾಗಿ ರಮೇಶ್ ಭರವಸೆ ನೀಡಿದ್ದಾರೆ.

Facebook Comments