ಕೋವಿಡ್ 19 ನಿಯಂತ್ರಣಕ್ಕೆ ಖಾಸಗಿ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜುಗಳ ಸಹಕಾರ ಅಗತ್ಯ- ಸಚಿವ ಅರವಿಂದ ಲಿಂಬಾವಳಿ

ಈ ಸುದ್ದಿಯನ್ನು ಶೇರ್ ಮಾಡಿ

ಮಹದೇವಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೋವಿಡ್-19 ನಿಯಂತ್ರಣ ಕ್ರಮಗಳನ್ನು ಪರಿಶೀಲಿಸುವ ಸಲುವಾಗಿ ಇಂದು ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಶ್ರೀ ಅರವಿಂದ ಲಿಂಬಾವಳಿ ಅವರು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರ ಉಪಸ್ಥಿತಿಯಲ್ಲಿ ಬಿಬಿಎಂಪಿ ಆರೋಗ್ಯ ಇಲಾಖೆ ಹಾಗೂ ಇನ್ನಿತರ ಇಲಾಖೆಗಳ ಉನ್ನತಾಧಿಕಾರಿಗಳ ಸಭೆ ನಡೆಸಿದರು.

ಈ ಸಭೆಯಲ್ಲಿ ಮಾತನಾಡಿದ ಅವರು ಖಾಸಗಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳು ಕೋವಿಡ್ 19 ನಿಯಂತ್ರಣಕ್ಕಾಗಿ ಸರ್ಕಾರಕ್ಕೆ ಎಲ್ಲಾ ರೀತಿಯಲ್ಲಿ ಸಹಕಾರ ನೀಡುವುದು ಅವಶ್ಯವಿದೆ. ಸರ್ಕಾರದಿಂದ ಅವರಿಗೆ ಬೇಕಾದ ನೆರವು ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಇಂತಹ ಸಂಕಷ್ಟದ ಸಮಯದಲ್ಲಿ ಎಲ್ಲರೂ ಸೇರಿ ಪರಿಸ್ಥಿತಿ ನಿಭಾಯಿಸಬೇಕಿದೆ ಎಂದರು.

ನಂತರ ಅವರುಕೋವಿಡ್ ಸೋಂಕಿತರ ಸಲುವಾಗಿ ಒದಗಿಸುತ್ತಿರುವ ಸೌಲಭ್ಯಗಳು, ಆಸ್ಪತ್ರೆಗಳಲ್ಲಿ ಇರುವ ಐಸಿಯು, ಹೆಚ್ಡಿ ಯು, ವೆಂಟಿಲೇಟರ್ ಗಳ ಸಂಖ್ಯೆ, ಸದ್ಯ ಲಭ್ಯವಿರುವ ಹಾಸಿಗೆಗಳ ಅಂಕಿಅಂಶವನ್ನು ಪಡೆದುಕೊಂಡರು. ಕೋವಿಡ್ ನಿಯಂತ್ರಣಕ್ಕಾಗಿ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಅವರು ಸೂಚಿಸಿದರು.

ಸಭೆಯಲ್ಲಿ ಹಿರಿಯ ಅಧಿಕಾರಿಗಳಾದ ಡಾ. ಮಂಜುಳಾ ಡಿಸಿಪಿ ದೇವರಾಜ್ ಮತ್ತು ಬಿಬಿಎಂಪಿ ಜಂಟಿ ಆಯುಕ್ತ ವೆಂಕಟಾಚಲಪತಿ ಸೇರಿದಂತೆ ಅನೇಕ ಉನ್ನತ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Facebook Comments