ಅನಾನಸ್ ಬೆಳೆದ ರೈತರ ಸಮಸ್ಯೆಗಳನ್ನು ಸಿಎಂ ಗಮನಕ್ಕೆ ತರುತ್ತೇನೆ : ಸಚಿವ ಬಿ.ಸಿ.ಪಾಟೀಲ್

ಈ ಸುದ್ದಿಯನ್ನು ಶೇರ್ ಮಾಡಿ

ಶಿವಮೊಗ್ಗ,ಏ.10-ಜಿಲ್ಲೆಯಲ್ಲಿ ಕೊರೊನಾ‌ ಲಾಕ್ಡೌನ್‌ನಿಂದ ಅನಾನಸ್ ಬೆಳೆದ ರೈತರಿಗೆ ತಲೆದೋರಿರುವ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲೆಯ ಕೃಷಿ, ತೋಟಗಾರಿಕಾ, ಪಶುಸಂಗೋಪನೆ, ಕೃಷಿ ಉಪಕರಣ ವರ್ತಕರು, ಜನಪ್ರತಿನಿಧಿಗಳು ಸೇರಿದಂತೆ ವಿವಿಧ ಇಲಾಖಾಧಿಕಾರಿಗಳ ಜೊತೆ ಕೊರೊನಾ ಲಾಕ್ಡೌನ್‌ನಿಂದ ರೈತರಿಗಾಗಿರುವ ಸಮಸ್ಯೆಗಳು ಕೃಷಿ ಚಟುವಟಿಕೆ ಸ್ಥಿತಿಗತಿ ಕುರಿತು ಸಭೆ ನಡೆಸಿದರು.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ಅನಾನಸ್ ಹಾಗೂ ಶುಂಠಿ ಕ್ವಾರಿಂಗ್ ಸಮಸ್ಯೆಗಳ ಬಗ್ಗೆ ಗಮನ ಹರಿಸಲಾಗಿದೆ. ಉತ್ತರ ಭಾರತದಲ್ಲಿ ಅನಾನಸ್ ಕಾರ್ಖಾನೆಗಳು ಲಾಕ್ಡೌನ್‌ನಿಂದ ಮುಚ್ಚಿರುವುದರಿಂದ ಅನಾನಸ್ ಮಾರಾಟಕ್ಕೆ ತೊಂದರೆಯಾಗಿದೆ‌.

ಅನಾನಸ್ ಬೆಳೆಗಾರರ ಸಮಸ್ಯೆ ಬಗ್ಗೆ ಮುಂದಿನ ವಾರ ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಅವರ ಜೊತೆ ಸಭೆ ನಡೆಸಿ ಗಮನಕ್ಕೆ ತಂದು ದೆಹಲಿ, ರಾಜಸ್ಥಾನ ಸೇರಿದಂತೆ ಉತ್ತರ ಭಾರತ ರಾಜ್ಯಗಳಲ್ಲಿ ಅನಾನಸ್ ಕಾರ್ಖಾನೆಗಳು ತೆರೆಯಲು ಅಲ್ಲಿನ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವ ಬಗ್ಗೆ ಚರ್ಚಿಸಿ‌ ಸಾಧಕ ಬಾಧಕ ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು‌.

ಕೃಷಿಗೆ ಪೂರಕವಾದ ಉಪಕರಣಗಳ ಅಂಗಡಿ ತೆರೆಯಬೇಕು‌. ಇವುಗಳನ್ನು ಯಾವುದೇ ಕಾರಣಕ್ಕೂ ಮುಚ್ಚಿಸಬಾರದು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಟ್ರ್ಯಾಕ್ಟರ್‌ ಸೇರಿದಂತೆ ಕೃಷಿ ಯಂತ್ರಗಳ ದುರಸ್ಥಿ ಅಂಗಡಿಗಳು,‌ ಕೃಷಿ ಚಟುವಟಿಕೆ ವಾಹನಗಳಿಗೆ ಪೆಟ್ರೋಲ್ ಡೀಸೆಲ್ ಕೂಡ ಪೂರೈಸಬೇಕು.

ಎಪಿಎಂಸಿ ಮಾರುಕಟ್ಟೆಗಳು ಕೂಡ ತೆರೆಯುವಂತೆ ನಿರ್ದೇಶನ ನೀಡಲಾಗಿದೆ‌ ಎಂದು ಸಚಿವರು ಸ್ಪಷ್ಟಪಡಿಸಿದರು. ಕೊರೊನಾ ಲಾಕ್ಡೌನ್ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಕೃಷಿ, ರೈತರ ಚಟುವಟಿಕೆ, ಸ್ಥಿತಿಗತಿ ಕುರಿತು ಜಿಲ್ಲೆಯ ಕೃಷಿ,ತೋಟಗಾರಿಕೆ, ಲಾಕ್ಡೌನ್ ಬಳಿಕ ರೈತ ಸಮುದಾಯ ಸಂಕಷ್ಟಕ್ಕೀಡಾಗಿತ್ತು.

ಬಿತ್ತನೆ , ಉಳುಮೆ, ಕೊಯ್ಲು ಸೇರಿದಂತೆ ಎಲ್ಲಾ ಕೃಷಿ ಚಟುವಟಿಕೆಗಳಿಗೆ ನಿರ್ಬಂಧ ತೆರವುಗೊಳಿಸಲಾಗಿದೆ. ತಬ್ಲೀಘಿ ಧಾರ್ಮಿಕ ಸಭೆಯಿಂದಲೂ ರಾಜ್ಯದಲ್ಲಿ ಕರೋನಾ ಸೋಂಕು ಇನ್ನಷ್ಟು ಹರಡುವಂತಾಯಿತು.  ಮುಖ್ಯಮಂತ್ರಿಗಳು ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿ ತಿಂಗಳು ಜಿಲ್ಲಾ ಸಭೆ ನಡೆಸುತ್ತಾರೆ.

ಕೃಷಿ ಸಚಿವನಾಗಿ ಜಿಲ್ಲಾ ಪ್ರವಾಸ ನಡೆಸಿ ಖುದ್ದು ಪರಿಶೀಲನೆ ಮಾಡಿ ರೈತರ ಸಮಸ್ಯೆಗಳನ್ನು ಆಲಿಸುತ್ತಿದ್ದೇನೆ. ಜಿಲ್ಲೆಯಲ್ಲಿ ಮುಂಗಾರು ಬಿತ್ತನೆಗೆ ರೈತರಿಗೆ ಯಾವುದೇ ರೀತಿಯಲ್ಲಿ ಬಿತ್ತನೆ ಬೀಜ, ರಸಗೊಬ್ಬರದ ಕೊರತೆಯಾಗದಂತೆ ಸಿದ್ಧತೆ‌ ನಡೆಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕರಾದ ಹೆಚ್.ಹಾಲಪ್ಪ, ಅರಗ ಜ್ಞಾನೇಂದ್ರ,‌ ಮೇಲ್ಮನೆ‌ ಸದಸ್ಯರಾದ ಆಯನೂರು ಮಂಜುನಾಥ್, ರುದ್ರೇಗೌಡ, ಜಿಲ್ಲಾಧಿಕಾರಿಗಳು ಉಪಸ್ಥಿತರಿದ್ದರು.

Facebook Comments

Sri Raghav

Admin