ಪ್ರವಾಸೋದ್ಯಮ ಸಚಿವ ಸಿ.ಟಿ.ರವಿಗೂ ಕೊರೊನಾ ಪಾಸಿಟಿವ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ಪ್ರವಾಸೋದ್ಯಮ ಸಚಿವ ಸಿಟಿ ರವಿಗೂ ಕೊರೊನಾ ಸೋಂಕು ವಕ್ಕರಿಸಿದೆ. ಈವರೆಗೆ ರಾಜ್ಯದಲ್ಲಿ ಐವರು ರಾಜಕೀಯ ನಾಯಕರುಗಳಿಗೆ ಸೋಂಕು ದೃಢಪಟ್ಟಿದ್ದು, ಇದರಲ್ಲಿ ಸಿಟಿ ರವಿ ಐದನೆಯವರಾಗಿದ್ದಾರೆ.

ಸಿ.ಟಿ.ರವಿ ಅವರಿಗೆ ಕೊರೊನಾ ಸೋಂಕು ತಗುಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.

ಸಂಸದೆ ಸುಮಲತಾ ಅಂಬರೀಶ್, ಶಾಸಕರಾದ ಪ್ರಾಣೇಶ್, ಅಜೇಯ್ ಸಿಂಗ್, ಪುಟ್ಟಣ್ಣಯ್ಯ ಸೇರಿದಂತೆ ಹಲವು ಜನಪ್ರತಿನಿಧಿಗಳಿಗೆ ಕೊರೊನಾ ತಗುಲಿದೆ. ಎಲ್ಲರೂ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಆದಷ್ಟು ಬೇಗ ಗುಣಮುಖರಾಗಿ ಬರುತ್ತೇವೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ.

ಈ ಹಿಂದೆಯೂ ಕೊರೊನಾ ಪರೀಕ್ಷೆಗೆ ಒಳಗಾಗಿದ್ದ ಸಿ.ಟಿ.ರವಿ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದರು. ನೆಗೆಟಿವ್ ವರದಿ ಬಂದ ಬಳಿಕ ಕೆಲಸಗಳಲ್ಲಿ ತೊಡಗಿಕೊಂಡಿದ್ದರು. ಇತ್ತ ಸಿಎಂ ಬಿ.ಎಸ್.ಯಡಿಯೂರಪ್ಪ ಸಹ ಕೊರೊನಾ ಆತಂಕದ ಹಿನ್ನೆಲೆ ಸೆಲ್ಫ್ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ಸಂಸದೆ ಸುಮಲತಾ ಅಂಬರೀಶ್​​, ಕುಣಿಗಲ್​ ಶಾಸಕ ರಂಗನಾಥ್, ವಿಧಾನ ಪರಿಷತ್​ ಸದಸ್ಯ ಬೋಜೇಗೌಡ, ಹೊಸಕೋಟೆ ಶಾಸಕ ಶರತ್​ ಬಚ್ಚೇಗೌಡಗೆ ಈ ಮೊದಲು ಸೋಂಕು ದೃಢಪಟ್ಟಿತ್ತು.

Facebook Comments

Sri Raghav

Admin