‘ಸತ್ಯವಂತರಿಗೆ ಇದು ಕಾಲವಲ್ಲ’ : ಸಚಿವ ಸಿ.ಟಿ.ರವಿ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಸೆ.11- ಸತ್ಯವಂತರಿಗೆ ಇದು ಕಾಲವಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಿಳಿಸಿದರು. ನಗರದಲ್ಲಿಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸತ್ಯ ಹೇಳಿದರೆ ಕೆಲವರಿಗೆ ಅಪಥ್ಯವಾಗುತ್ತದೆ ಎಂದು ಹೇಳುವ ಮೂಲಕ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವವರಿಗೆ ಟಾಂಗ್ ನೀಡಿದರು.

ಶಾಂತವೇರಿ ಗೋಪಾಲಗೌಡರು, ಕುವೆಂಪು, ಕೆಂಗಲ್ ಹನುಮಂತಯ್ಯನಂತ ಮಹನೀಯರು ಒಕ್ಕಲಿಗ ಸಮುದಾಯಕ್ಕೆ ಆದರ್ಶರಾಗಬೇಕೋ ಅಥವಾ ಇನ್ಯಾರೋ ಆದರ್ಶರಾಗಬೇಕು ಎಂಬುದನ್ನು ಸಮುದಾಯದವರೇ ನಿರ್ಧರಿಸಬೇಕಿದೆ ಎಂದು ಮಾರ್ಮಿಕವಾಗಿ ನುಡಿದರು.

ಇಡಿಗೆ ಯಾವ ಜಾತಿ, ಯಾವ ಪಕ್ಷವಿದೆ? ಈ ಸಂಸ್ಥೆಯನ್ನು ಹುಟ್ಟುಹಾಕಿದ್ದು ಯಾರು? ಭಾರತೀಯ ಜನತಾ ಪಕ್ಷವಂತೂ ಅಲ್ಲ ಎಂದು ಹೇಳಿದರು. ಕೋಟ್ಯಂತರ ರೂ. ಅಕ್ರಮ ಆಸ್ತಿ ಸಂಬಂಧ ಇಡಿ ತನಿಖೆ ಮಾಡುತ್ತಿದೆ. ತನಿಖೆ ಮಾಡುವುದೇ ತಪ್ಪು ಎಂದರೆ ಹೇಗೆ ಎಂದು ಸಿ.ಟಿ.ರವಿ ಪ್ರಶ್ನಿಸಿದರು.

Facebook Comments