ಪಕ್ಷ ಅಧಿಕಾರಕ್ಕೆ ತರಲು ಎಲ್ಲರ ಸಹಕಾರ ಅಗತ್ಯ: ಸಚಿವ ಗೋಪಾಲಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

ಹಾಸನ,ಏ.23- ಬೇಲೂರು ಪುರಸಭೆ ಚುನಾವಣೆಯಲ್ಲಿ ಪಕ್ಷ ಅಕಾರಕ್ಕೆ ಬರಲು ಎಲ್ಲರೂ ಸಹಕರಿಸಬೇಕು ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಮನವಿ ಮಾಡಿದ್ದಾರೆ. ಬೇಲೂರು ತಾಲೂಕಿನಲ್ಲಿ ಪುರಸಭೆ ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಅವರು, ಈ ಬಾರಿ ಚುನಾವಣೆ ಗೆದ್ದರೆ ನಮ್ಮ ಪಕ್ಷದಿಂದ ಶುದ್ಧ ಕುಡಿಯುವ ನೀರಿನ ಸಮಸ್ಯೆ ನೀಗಿಸಲಾಗವುದು.

ಪೂರ್ಣ ಪ್ರಮಾಣ ನೀರಿನ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು. ಯಗಚಿ ನದಿ ಹಳೇ ಸೇತುವೆ ಪೂರ್ಣ ಪ್ರಮಾಣದಲ್ಲಿ ಜೀರ್ಣೋದ್ದಾರಗೊಳಿಸಿ ರಕ್ಷಣೆ ಮಾಡಲಾಗುವುದು. ನಗರದ ವಿಷ್ಣು ಸಮುದ್ರ ಕೆರೆ ಅಭಿವೃದ್ಧಿ ಪಡಿಸಿ ದೋಣಿ ವಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಇನ್ನು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬೇಲೂರು ನಗರವನ್ನು ಅತೀ ಹೆಚ್ಚಿನ ಅಭಿವೃದ್ಧಿ ಪಡಿಸುತ್ತೇವೆ ಎಂದು ಇದೇ ವೇಳೆ ಅವರು ಹೇಳಿದ್ದಾರೆ. ಜಿಲ್ಲಾ ಅಧ್ಯಕ್ಷ ಸುರೇಶ್, ಮಾಜಿ ಶಾಸಕ ವಿಶ್ವನಾಥ್, ಸ್ಥಳೀಯ ಬಿಜಿಪಿ ಮುಖಂಡರು ಈ ಸಂದರ್ಭದಲ್ಲಿದ್ದರು.

Facebook Comments