ಸಚಿವ ಗೋಪಾಲಯ್ಯಗೂ ಕೊರೋನಾ ಪಾಸಿಟಿವ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಆಗಿರುವ ಕೆ.ಗೋಪಾಲಯ್ಯ ಅವರಿಗೂ ಕೂಡ ಕೊರೋನಾ ದೃಢಪಟ್ಟಿದೆ. ಕೊರೊನಾ ಸೋಂಕು ಧೃಡವಾದ ಹಿನ್ನೆಲೆಯಲ್ಲಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿರುವ ಹಿನ್ನೆಲೆಯಲ್ಲಿ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಇಂದು ಮಧ್ಯಾಹ್ನ 4 ಗಂಟೆಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದೇನೆ.

ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಹಾಗೂ ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ವಿನಂತಿಸಿಕೊಳ್ಳುತ್ತೇನೆ ಎಂದು ಸಚಿವ ಗೋಪಾಲಯ್ಯ ತಿಳಿಸಿದ್ದಾರೆ. . ಹಾಸನ ಜಿಲ್ಲೆ ಉಸ್ತುವಾರಿ ಸಚಿವ ಹಾಗೂ .

Facebook Comments

Sri Raghav

Admin