ಶಾಲೆಗಳಿಗೆ ತೆರಳಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಸಚಿವ ಗೋಪಾಲಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜೂ.25-ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಇಂದಿನಿಂದ ಆರಂಭವಾದ ಹಿನ್ನೆಲೆಯಲ್ಲಿ ಸಚಿವ ಕೆ.ಗೋಪಾಲಯ್ಯ ಅವರು ಇಂದು ವಿವಿಧ ಶಾಲೆಗಳಿಗೆ ತೆರಳಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿ ಶುಭ ಕೋರಿದರು.

ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಂಕರಮಠ ಸಮೀಪವಿರುವ ಅನುಪಮ ಹಾಗೂ ನಾಗಪುರ ವಾರ್ಡ್‍ನಲ್ಲಿರುವ ಅರವಿಂದ ಸೇರಿದಂತೆ ಮತ್ತಿತರ ಪರೀಕ್ಷಾ ಕೇಂದ್ರಗಳಿಗೆ ತೆರಳಿ ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬಿದರು.

ಖುದ್ದು ಪರೀಕ್ಷಾ ಕೇಂದ್ರದ ಬಳಿ ಆಗಮಿಸಿದ ಸಚಿವರು, ವಿದ್ಯಾರ್ಥಿಗಳನ್ನು ಭೇಟಿಯಾಗಿ ಯಾವುದೇ ಕಾರಣಕ್ಕೂ ಧೈರ್ಯ ಕಳೆದುಕೊಳ್ಳಬೇಡಿ. ಆತ್ಮಸ್ಥೈರ್ಯದಿಂದ ಪರೀಕ್ಷೆಯನ್ನು ಬರೆಯಬೇಕು. ಗಾಳಿ ಮಾತುಗಳಿಗೆ ಕಿವಿಗೊಡಬೇಡಿ. ಧೈರ್ಯದಿಂದ ಪರೀಕ್ಷೆ ಬರೆಯಿರಿ ಎಂದು ಶುಭ ಹಾರೈಸಿದರು.

ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಉಚಿತವಾಗಿ ಸಾರಿಗೆ ವ್ಯವಸ್ಥೆ, ಮಾಸ್ಕ್ ವಿತರಣೆ, ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್, ಸಾಮಾಜಿಕ ಅಂತರ ಸೇರಿದಂತೆ ಹತ್ತು ಹಲವು ಕ್ರಮಗಳನ್ನು ಕೈಗೊಂಡಿದ್ದೇವೆ.

ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಸಾರಿಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಗೃಹ ಇಲಾಖೆ ಸೇರಿದಂತೆ ಅನೇಕ ಇಲಾಖೆಗಳು ಕೈಜೋಡಿಸಿವೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎಸ್.ಸುರೇಶ್ ಕುಮಾರ್ ಅವರು ಕಳೆದ ಹಲವು ದಿನಗಳಿಂದ ನಿರಂತರವಾಗಿ ಹಲವು ಇಲಾಖೆಗಳ ಸಚಿವರು ಮತ್ತು ಅಕಾರಿಗಳ ಸಭೆ ನಡೆಸಿದ್ದಾರೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಿಂಚಿತ್ತೂ ತೊಂದರೆಯಾಗದಂತೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ. ದ್ಯಾರ್ಥಿಗಳು ವದಂತಿಗಳಿಗೆ ಗಮನಕೊಡದೆ ಆಯಾ ದಿನದ ವಿಷಯಗಳ ಕಡೆ ಗಮನಕೊಟ್ಟು ಪರೀಕ್ಷೆ ಬರೆಯಿರಿ ಎಂದು ಸಚಿವರು ಹೇಳಿದರು.

ಇದೇ ವೇಳೆ ಸಚಿವರು ವಿದ್ಯಾರ್ಥಿಗಳಿಗೆ ಉಚಿತವಾಗಿ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಿ ನಿಮ್ಮೆಲ್ಲರ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದರು. ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಯರಾಮ್, ಕ್ಷೇತ್ರ ಶಿಕ್ಷಣಾಕಾರಿ ರಮೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Facebook Comments

Sri Raghav

Admin