ನನ್ನ ಹೆಸರಲ್ಲಿ ಹಣ ವಸೂಲಿ ಮಾಡಿದರೆ ಹುಷಾರ್ : ಸಚಿವ ಗೋಪಾಲಯ್ಯ ಎಚ್ಚರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜೂ.22-ನನ್ನ ಹೆಸರಿನಲ್ಲಿ ಅಧಿಕಾರಿಗಳೇ ಇರಲಿ ಇನ್ಯಾರೇ ಇರಲಿ ಹಣ ವಸೂಲಿ ಮಾಡುವುದು ಇಲ್ಲವೇ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವುದು ಕಂಡುಬಂದರೆ ಅಂಥವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸುತ್ತೇನೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಕಟ್ಟುನಿಟ್ಟಿನ ಎಚ್ಚರಿಕೆ ಕೊಟ್ಟಿದ್ದಾರೆ.

ಕೆಲವರು ನನ್ನ ಹೆಸರಿನಲ್ಲಿ ತಿಂಗಳಿಗೆ ಇಂತಿಷ್ಟು ಹಣ ನೀಡಬೇಕೆಂಬ ಸುಳ್ಳು ಸುದ್ದಿಯನ್ನು ಹಬ್ಬಿಸಿದ್ದಾರೆ. ನಾನು ನನ್ನ ಇಲಾಖೆಯ ಯಾವುದೇ ಅಕಾರಿಗೂ ಹಣ ನೀಡಬೇಕೆಂಬ ಬೇಡಿಕೆ ಇಟ್ಟಿಲ್ಲ. ಆಡಿಯೋದಲ್ಲಿ ಕೆಲವರು ನನ್ನ ಘನತೆಗೆ ಮಸಿ ಬಳಿಯುವ ಪ್ರಯತ್ನ ಮಾಡಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾನು ಆಡಿಯೋ ವೈರಲ್ ಆದ ಬೆನ್ನಲ್ಲೇ ಕೆಲವು ಅಕಾರಿಗಳನ್ನು ಅಮಾನತ್ತುಪಡಿಸಿದ್ದೇನೆ. ನನ್ನ ಹೆಸರಿನಲ್ಲಿ ಯಾರೊಬ್ಬರಿಗೂ ಹಣ ನೀಡಬೇಕೆಂದು ಸೂಚನೆ ಕೊಟ್ಟಿಲ್ಲ. ಆ ರೀತಿ ಯಾವುದಾದರೂ ಪ್ರಕರಣಗಳಿದ್ದರೆ ನೇರವಾಗಿ ನನ್ನ ಗಮನಕ್ಕೆ ತನ್ನಿ ಎಂದು ಖುದ್ದು ಸಚಿವರಾದ ಗೋಪಾಲಯ್ಯ ಅವರೇ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಇಲಾಖೆಯಲ್ಲಿ ತಾಂಡವವಾಡುತ್ತಿದ್ದ ಭ್ರಷ್ಟಾಚಾರಕ್ಕೆ ನಾನು ಸಚಿವನಾದ ಮೇಲೆ ಕಡಿವಾಣ ಹಾಕಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಜೊತೆಗೆ ಇಲಾಖೆಯಲ್ಲಿ ಸುಧಾರಣೆಗಳನ್ನು ಜಾರಿಗೆ ಮಾಡಿದ್ದೇನೆ. ನನ್ನ ರಾಜಕೀಯ ಏಳಿಗೆಯನ್ನು ಸಹಿಸದೆ ಕೆಲವರು ಈ ಷಡ್ಯಂತರ ರೂಪಿಸಿದ್ದಾರೆ ಎಂದು ಹೇಳಿದ್ದಾರೆ.

ಕೋವಿಡ್ ಸಂಕಷ್ಟದ ಸಂದರ್ಭದಲ್ಲೂ ಇಲಾಖೆಗೆ ಶೇ.10ರಷ್ಟು ಲಾಭ ತಂದುಕೊಟ್ಟು ಅನೇಕ ಸುಧಾರಣೆಗಳನ್ನು ಮಾಡಲಾಗಿದೆ. ಹೊಸ ವಾಹನಗಳ ಖರೀದಿ, ಸಿಬ್ಬಂದಿಗಳಿಗೆ ಪಿಸ್ತೂಲ್ ನೀಡುವುದು ಸೇರಿದಂತೆ ಹತ್ತು ಹಲವು ನಿಯಮಗಳನ್ನು ಜಾರಿ ಮಾಡಿದ್ದೇವೆ. ಹಣದ ಬೇಡಿಕೆ ಇಟ್ಟಿದ್ದೇನೆ ಎಂಬ ಆರೋಪ ನನ್ನ ರಾಜಕೀಯ ವಿರೋಗಳ ಕುತಂತ್ರ ಎಂದು ಗೋಪಾಲಯ್ಯ ಆರೋಪಿಸಿದ್ದಾರೆ.

ಇಲಾಖೆಯಲ್ಲಿ ಯಾವುದೇ ಕಾರಣಕ್ಕೂ ಬೇರೆಯವರ ಹಸ್ತಕ್ಷೇಪಕ್ಕೆ ಆಸ್ಪದ ಇಲ್ಲದಂತೆ ಮುನ್ನೆಡೆಸುತ್ತಿದ್ದೇವೆ. ಮತ್ತೊಮ್ಮೆ ಸ್ಪಷ್ಟಪಡಿಸುವಂತೆ ನನ್ನ ಹೆಸರಿನಲ್ಲಿ ಯಾರಾದರೂ ಹಣದ ಕೇಳುವುದು ಇಲ್ಲವೇ ಇತರೆ ಆಮಿಷಗಳನ್ನಿಟ್ಟರೆ ನನ್ನ ಗಮನಕ್ಕೆ ತರಬೇಕೆಂದು ಗೋಪಾಲಯ್ಯ ಅವರು ಮನವಿ ಮಾಡಿದ್ದಾರೆ.

Facebook Comments

Sri Raghav

Admin