ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರೇ ಮುಂದು : ಸಚಿವ ಗೋಪಾಲಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮಾ.26- ಮಹಿಳೆಯರು ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿದ್ದು, ಪುರುಷರಿಗೆ ಸರಿಸಮಾನವಾಗಿದ್ದಾರೆ ಎಂದು ಸಚಿವ ಗೋಪಾಲಯ್ಯ ಇಂದಿಲ್ಲಿ ತಿಳಿಸಿದರು. ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ನಂದಿನಿ ಲೇಔಟ್ ನ ಸಕ್ರ್ಯುಲರ್ ಪಾರ್ಕ್‍ನಲ್ಲಿರುವ ಪಂಚವಟಿ ನಗೆಕೂಟ ಹಾಲ್‍ನಲ್ಲಿ ಜ್ಯೋತಿ ಆಟ್ರ್ಸ್ ಅಕಾಡಮಿ ಮತ್ತು ಜೈ ಮಾರುತಿ ಬನಶಂಕರಿ ಮಹಿಳಾ ಸಂಘ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅಕ್ಕ-ತಂಗಿ, ಅಮ್ಮ, ಮಡದಿಯಾಗಿ, ಸಮಾಜ ಸೇವಕಿಯಾಗಿ ಮತ್ತು ಎಲ್ಲಾ ಕ್ಷೇತ್ರದಲ್ಲೂ ಸೇವೆ ಸಲ್ಲಿಸುತ್ತಿದ್ದಾಳೆ. ನನ್ನ ಕ್ಷೇತ್ರದ ಹಾಗೂ ರಾಜ್ಯದ ಎಲ್ಲಾ ಮಹಿಳೆಯರಿಗೆ ನನ್ನ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಸುಗಮ ಸಂಸಾರಕ್ಕೆ ಮಾಡಲು ಹೆಣ್ಣು ಮತ್ತು ಗಂಡು ಇಬ್ಬರೂ ಮುಖ್ಯ. ಒಂದು ಗಂಡಿನ ಶ್ರೇಯಸ್ಸಿನ ಹಿಂದೆ ಹೆಣ್ಣು ಇರುತ್ತಾಳೆ. ನಮ್ಮಲ್ಲೂ ಹಲವಾರು ಮಹಿಳೆಯರು ರಾಜ್ಯಕ್ಕೆ ಹಾಗೂ ದೇಶಕ್ಕೆ ತಮ್ಮದೇ ಅದ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಡಿಸಿದ ಬಜೆಟ್‍ನಲ್ಲಿ ಹೆಚ್ಚಿನ ಅನುದಾನವನ್ನು ಮಹಿಳೆಯರಿಗೆ ಘೋಷಿಸಿದ್ದಾರೆ. ಈ ನಿಟ್ಟಿನಲ್ಲಿ ಕ್ಷೇತ್ರದ ಮಹಿಳೆಯರಿಗೆ ಎಲ್ಲ ರೀತಿಯ ಸವಲತ್ತುಗಳನ್ನು ಒದಗಿಸಿ ಕೊಡಲು ಸಿದ್ಧನಿದ್ದೇನೆ ಎಂದು ತಿಳಿಸಿದರು. ಹೇಮಲತಾ ಗೋಪಾಲಯ್ಯ ಮಾತನಾಡಿ, ಹೆಣ್ಣು ಎಲ್ಲಾ ಕ್ಷೇತ್ರದಲ್ಲೂ ತನ್ನ ಛಾಪು ಮೂಡಿಸುತ್ತಿದ್ದು, ಹೆಣ್ಣಾಗಿ ಹುಟ್ಟಿದ್ದಕ್ಕೆ ನಾವೆಲ್ಲರೂ ಹೆಮ್ಮೆ ಪಡಬೇಕು. ಹೆಣ್ಣು ಜಗದ ಕಣ್ಣು ಮಹಿಳಾ ಸಬಲೀಕರಣಕ್ಕಾಗಿ ಇಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮುಂದಾಗಿದ್ದು, ಭೇಟಿ ಪಡಾವೊ ಭೇಟಿ ಬಚಾವೋ, ಭಾಗ್ಯಲಕ್ಷ್ಮಿ ಬಾಂಡ್ ಯೋಜನೆ, ಯಶಸ್ವಿನಿ, ಸುಕನ್ಯಾ ಸಮೃದ್ಧಿ ಯೋಜನೆ ಹೀಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಇವುಗಳ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಹಲವು ವೃದ್ಧ ಮಹಿಳೆಯರಿಗೆ ಆಹಾರದ ಕಿಟ್ ವಿತರಣೆ ಮಾಡಲಾಯಿತು. ಕ್ಷೇತ್ರದ ಮಹಿಳಾ ಮೋರ್ಚಾ ಅಧ್ಯಕ್ಷೆ ಗಂಗಮ್ಮ, ಮಹಿಳಾ ಮುಖಂಡರಾದ ಪುಷ್ಪಾ ರಾಜೇಂದ್ರ ಕುಮಾರ್, ಶಿಲ್ಪಾ ರಾಘವೇಂದ್ರ, ಯಶೋಧಾ ನಾರಾಯಣ, ವಿಜಯಲಕ್ಷ್ಮಿ, ಕಮಲಾ ಹನುಮಂತರಾಯಪ್ಪ , ಗೌರಮ್ಮ, ಪ್ರಭಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Facebook Comments