ನಾಗಪುರ ವಾರ್ಡ್‍ನಲ್ಲಿ ಸಚಿವ ಗೋಪಾಲಯ್ಯ ಪ್ರಗತಿ ಪರಿಶೀಲನಾ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.21- ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ನಾಗಪುರ ವಾರ್ಡ್ ನ ಬಿಬಿಎಂಪಿ ಕಚೇರಿಯಲ್ಲಿ ಆಹಾರ ಸಚಿವ ಕೆ.ಗೋಪಾಲಯ್ಯ ಹಾಗೂ ಬಿಬಿಎಂಪಿ ಆಡಳಿತಾಕಾರಿ ಗೌರವ್ ಗುಪ್ತಾ ಅವರು ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಪಾಲ್ಗೊಂಡಿದ್ದ ಕ್ಷೇತ್ರದ ನಾಗರಿಕರಿಂದ ಅಹವಾಲು ಸ್ವೀಕರಿಸಿದ ಸಚಿವರು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.

ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸುವುದು ಹಾಗೂ ಕಾಲಮಿತಿಯೊಳಗೆ ಅನುಷ್ಠಾನ ಮಾಡುವ ಮೂಲಕ ಸ್ಥಳೀಯ ಮೂಲ ಸಮಸ್ಯೆಗಳಾದ ಕುಡಿಯುವ ನೀರು, ಬೀದಿ ದೀಪ, ಒಳಚರಂಡಿ ವ್ಯವಸ್ಥೆ ಹಾಗೂ ರಸ್ತೆ ಕಾಮಗಾರಿಗಳ ಬಾಕಿ ಇರುವ ಕೆಲಸಗಳು ತ್ವರಿತ ವಾಗಿ ಪೂರ್ಣಗೊಳಿಸಲು ಸಂಬಂಧಪಟ್ಟ ಗುತ್ತಿಗೆದಾರರು ಹಾಗೂ ಅಕಾರಿಗಳಿಗೆ ಸೂಚಿಸಿದರು.

ಬಿಬಿಎಂಪಿ ಆಡಳಿತಾಕಾರಿ ಗೌರವ್ ಗುಪ್ತಾ ಮಾತನಾಡಿ, ಸ್ಥಳೀಯ ನಿವಾಸಿಗಳಿಂದ ಕ್ಷೇತ್ರದ ಸಮಸ್ಯೆಗಳು ನಮ್ಮ ಗಮನಕ್ಕೆ ಬಂದಿದ್ದು, ಆದಷ್ಟು ಬೇಗ ಈ ಎಲ್ಲಾ ಕುಂದು ಕೊರತೆಗಳನ್ನು ತ್ವರಿತವಾಗಿ ಬಗೆಹರಿಸಲು ಸ್ಥಳದಲ್ಲಿದ್ದ ಅಕಾರಿಗಳಿಗೆ ನಿರ್ದೇಶನ ನೀಡಿದರು.

ನಂತರ ಗೌರವ್ ಗುಪ್ತಾ ಅವರು ಕಸ ವಿಲೇವಾರಿ ಮಾಡುವ ಹಾಗೂ ಸಂಗ್ರಹಿಸುವ ಒಣ ತ್ಯಾಜ್ಯ ಘಟಕಕ್ಕೆ ಸಚಿವರ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಭೆಯಲ್ಲಿ ಬಿಬಿಎಂಪಿ ಹಿರಿಯ ಅಕಾರಿಗಳು, ಸ್ಥಳೀಯರು ಭಾಗವಹಿಸಿದ್ದರು.

Facebook Comments