ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಗೋಪಾಲಯ್ಯ ವಿಶೇಷ ಸಂದರ್ಶನ

ಈ ಸುದ್ದಿಯನ್ನು ಶೇರ್ ಮಾಡಿ

– ಬಿ.ಎಸ್.ರಾಮಚಂದ್ರ
ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೊನಾ ಮಹಾಮಾರಿ ವಿರುದ್ಧ ಹೋರಾಡುತ್ತಿರುವ ಭಾರತದಲ್ಲಿ ಜಾಗೃತಿ ಹೆಚ್ಚುತ್ತಿದ್ದಂತೆಯೇ ಸೋಂಕಿನಿಂದ ಗುಣಮುಖರಾಗಿ ಚೇತರಿ ಸಿಕೊಳ್ಳುತ್ತಿರುವವರ ಸಂಖ್ಯೆಯೂ ಹೆಚ್ಚು ತ್ತಿರುವುದು ಆಶಾದಾಯಕ ಬೆಳವಣಿಗೆ ಯಾಗಿದೆ.

ಈಗಾಗಲೇ ಹಲವಾರು ದೇಶಗಳು ಪ್ರತಿಷ್ಠೆಯನ್ನು ಪಣಕ್ಕಿಟ್ಟು ಲಸಿಕೆ ಕಂಡು ಹಿಡಿಯಲು ಸಂಶೋಧಕರು ಮತ್ತು ವೈದ್ಯಕೀಯ ತಂಡಕ್ಕೆ ಎಲ್ಲ ರೀತಿಯ ನೆರವು ಒದಗಿಸಿವೆ. ಸದಾ ತಂತ್ರಜ್ಞಾನ ಮತ್ತು ಸುರಕ್ಷತಾ ವಲಯದಲ್ಲಿ ಹೆಗ್ಗಳಿಕೆ ಪಡೆದಿರುವ ರಷ್ಯಾ ಲಸಿಕೆ ಕಂಡುಹಿಡಿದಿದೆ ಎಂದು ಸ್ವತಃ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಘೋಷಣೆ ಮಾಡಿ ತನ್ನ ಮಗಳಿಗೇ ಅದನ್ನು ಕೊಡಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡುವ ಸಂದರ್ಭದಲ್ಲಿ ದೇಶೀಯವಾಗಿಯೇ ಮೂರು ಕೊರೊನಾ ಲಸಿಕೆ ಸಂಶೋಧನೆ ಅಂತಿಮ ಹಂತದಲ್ಲಿದೆ. ಶೀಘ್ರದಲ್ಲಿಯೇ ಸಾರ್ವಜನಿಕವಾಗಿ ಬಿಡುಗಡೆ ಮಾಡಲಾಗು ವುದು ಎಂದು ತಿಳಿಸುವುದರ ಜತೆಗೆ ಎಲ್ಲ ಜನಪ್ರತಿನಿಗಳು ಸಂಕಷ್ಟದ ಸಂದರ್ಭದಲ್ಲಿ ಜನರಿಗೆ ಸ್ಪಂದಿಸಬೇಕು ಎಂದು ಕರೆ ನೀಡಿದ್ದರು.

ಇಡೀ ಬೆಂಗಳೂರಿನಲ್ಲಿ ಆರೋಗ್ಯದ ವಿಷಯದಲ್ಲಿ ಎಂದೂ ರಾಜಿ ಮಾಡಿಕೊಳ್ಳದೆ ತಮ್ಮ ಕ್ಷೇತ್ರದ ಜನತೆಗೆ ಸದಾ ಸ್ಪಂದಿಸಿ ಅವರೊಂದಿಗೇ ಇರುವಂತಹ ಶಾಸಕರು ಪ್ರಸ್ತುತ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿರುವ ಗೋಪಾಲಯ್ಯನವರು ಇದನ್ನು ಅಕ್ಷರಶಃ ಪಾಲಿಸುತ್ತಿದ್ದಾರೆ.

ಸಚಿವರಾಗಿ ತಮ್ಮ ಇಲಾಖೆಯಲ್ಲಿ ಬದಲಾವಣೆಯ ಕ್ರಾಂತಿಯನ್ನೇ ಮಾಡಿ ಯಾರೂ ಕೂಡ ಹಸಿವಿನಿಂದ ಬಳಲಬಾರದು ಎಂಬ ದೃಷ್ಟಿಯಿಂದ ಉಚಿತ ಅಕ್ಕಿ, ಬೇಳೆ, ಎಣ್ಣೆ, ಸಕ್ಕರೆ ಸೇರಿದಂತೆ ಇತರೆ ವಸ್ತುಗಳನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ವಿತರಿಸುತ್ತಿದ್ದು, ಇದು ಪಾರದರ್ಶಕವಾಗಿ ನಡೆಯುತ್ತಿದೆಯೇ ಎಂಬುದನ್ನು ಖುದ್ದು ಪರಿಶೀಲಿಸಿ ಸೈ ಎನಿಸಿಕೊಂಡಿದ್ದಾರೆ.

ಇನ್ನು ಮಹಾಲಕ್ಷ್ಮಿ ಬಡಾವಣೆ ಯಲ್ಲಿ ಗೋಪಾಲಯ್ಯ ನವರು ಕೊರೊನಾ ಸಂದರ್ಭದಲ್ಲಿ ನಿಜಕ್ಕೂ ಆಪತ್ಭಾಂಧವರಂತೆಯೇ ಕಾರ್ಯನಿರ್ವಹಿಸಿ ದ್ದಾರೆ. ಇದಲ್ಲದೆ, ತಮ್ಮ ಉಸ್ತುವಾರಿ ಜಿಲ್ಲೆಯಾಗಿರುವ ಹಾಸನದಲ್ಲೂ ಕೂಡ ಕೊರೊನಾ ಸೋಂಕು ಹರಡದಂತೆ ವ್ಯಾಪಕ ಕ್ರಮಗಳನ್ನು ಕೈಗೊಂಡು ಹಗಲಿರುಳೆನ್ನದೆ ಶ್ರಮಿಸುತ್ತಿದ್ದಾರೆ.

ಪ್ರಸ್ತುತ ಅವರು ಜನರಿಗೆ ಕೋವಿಡ್ ಬಗ್ಗೆ ಆತಂಕ ಪಡಬೇಕಾಗಿಲ್ಲ. ಆತ್ಮಸ್ಥೈರ್ಯದಿಂದ ಎದುರಿಸಲು ಎಲ್ಲರೂ ಸಜ್ಜಾಗಬೇಕು. ಕೆಲವೊಂದು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಸುರಕ್ಷಿತವಾಗಿದ್ದು, ಪ್ರಸ್ತುತ ಎದುರಾಗಿರುವ ಸಂಕಷ್ಟಕ್ಕೆ ಈ ಸಂಜೆಯೊಂದಿಗೆ ತಮ್ಮ ಸಂವಾದ ನಡೆಸಿದ ಕೆಲ ಆಯ್ದ ಭಾಗಗಳನ್ನು ಓದುಗರಿಗೆ ತಿಳಿಸಲಾಗುತ್ತಿದೆ.

# ಕೊರೊನಾ ಜಾಗೃತಿ ಹೇಗಿದೆ? 
ಕಳೆದ ಮಾರ್ಚ್‍ನಿಂದಲೇ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಂಡು ಸೋಂಕು ಹರಡದಂತೆ ಲಾಕ್‍ಡೌನ್ ಸೇರಿದಂತೆ ಎಲ್ಲ ಅಗತ್ಯ ನಿಯಮಗಳನ್ನು ಜಾರಿಗೆ ತರಲಾಗಿತ್ತು. ದುರದೃಷ್ಟವಶಾತ್ ಅದು ನಿಯಂತ್ರಣಕ್ಕೆ ಸಿಗದೆ ಹರಡುತ್ತಿದೆ.
ಸಾಮಾನ್ಯವಾಗಿ ಈಗ ಆರೋಗ್ಯವಂತ ಮನುಷ್ಯರಲ್ಲಿ ಸೋಂಕು ಕಾಣಿಸಿಕೊಂಡರೆ ತಮ್ಮ ರೋಗ-ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವಂತಹ ಮಾತ್ರೆಗಳನ್ನು ಸೇವಿಸುವುದು ಮತ್ತು ಪ್ರತ್ಯೇಕ ಕೋಣೆಯಲ್ಲಿದ್ದು (ಹೋಂ ಕ್ವಾರಂಟೈನ್) ಬಿಸಿನೀರು ಸೇರಿದಂತೆ ವೈದ್ಯರ ಸಲಹೆಗಳನುಸಾರ ನಡೆದುಕೊಂಡರೆ ಕೇವಲ ನಾಲ್ಕೈದು ದಿನಗಳಲ್ಲಿ ಗುಣಮುಖರಾಗುತ್ತಾರೆ.
ಇತರೆ ಕಾಯಿಲೆಗಳಿಂದ (ಸಕ್ಕರೆ ಕಾಯಿಲೆ, ಹೃದಯ, ಕ್ಯಾನ್ಸರ್ ಇತರೆ) ಬಳಲುತ್ತಿರುವವರು ಅತ್ಯಂತ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಅವರು ತೆಗೆದುಕೊಳ್ಳುತ್ತಿರುವ ಔಷಧಗಳನ್ನು ತಪ್ಪಿಸಬಾರದು. ಹೊರಗೆ ಓಡಾಡುವುದನ್ನು ನಿಲ್ಲಿಸಬೇಕು. ಕೊರೊನಾ ತಾಗಿದರೂ ಕೂಡ ಆತಂಕಕ್ಕೊಳಗಾಗದೆ ಸೂಕ್ತ ಚಿಕಿತ್ಸೆ ಪಡೆದರೆ ಏನೂ ತೊಂದರೆ ಇಲ್ಲ.

# ಕ್ಷೇತ್ರದಲ್ಲಿ ಏನೇನು ಕ್ರಮ ಕೈಗೊಂಡಿ ದ್ದೀರಿ?
ನಾವು ಈಗಾಗಲೇ ಸೋಂಕು ನಿಯಂತ್ರಣಕ್ಕೆ ಹರಸಾಹಸ ಪಟ್ಟಿದ್ದೇವೆ. ಮೊದಲಿಗೆ ಕೊರೊನಾ ವಾರಿಯರ್ಸ್ (ವೈದ್ಯರು, ನರ್ಸ್‍ಗಳು, ಆಶಾ ಕಾರ್ಯಕರ್ತೆಯರು, ಪೆÇಲೀಸರು)ಗಳಿಗೆ ನಾನು ಆಭಾರಿಯಾಗಿದ್ದೇನೆ. ಎಲ್ಲ ವಾರ್ಡ್‍ಗಳಲ್ಲೂ ಈಗಾಗಲೇ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದೆ. ಕಳೆದ ಒಂದು ತಿಂಗಳಿನಿಂದ ಪ್ರತಿ ವಾರ್ಡ್‍ನ ಪ್ರತಿ ಮನೆಗೂ ಆರೋಗ್ಯ ಸಿಬ್ಬಂದಿ ಭೇಟಿ ನೀಡಿ ಪರೀಕ್ಷೆ ನಡೆಸುತ್ತಿದ್ದಾರೆ.

# ಸೋಂಕು ಹೆಚ್ಚುತ್ತಿದೆ, ಹೇಗೆ ನಿಭಾಯಿಸುತ್ತಿದ್ದೀರಿ?
ಇದು ನಮ್ಮ ಜವಾಬ್ದಾರಿ. ಜನರ ಸಮಸ್ಯೆಯನ್ನು ನಾನು ಹತ್ತಿರದಿಂದ ನೋಡಿದ್ದೇನೆ. ಅವರೊಂದಿಗೇ ಯಾವಾಗಲೂ ಇದ್ದು ಸ್ಪಂದಿಸುತ್ತೇನೆ. ಅದಕ್ಕಾಗಿಯೇ ನನ್ನ ಜನತೆ ನನ್ನನ್ನು ಅತಿಹೆಚ್ಚು ಪ್ರೀತಿಸುತ್ತಾರೆ. ಕೆಲವರು ನನಗೆ ನೇರವಾಗಿ ದೂರವಾಣಿ ಕರೆಗಳನ್ನು ಮಾಡುತ್ತಾರೆ. ನಮ್ಮ ಮುಖಂಡರಿಗೆ, ಪಾಲಿಕೆ ಸದಸ್ಯರಿಗೆ ಕರೆ ಮಾಡುತ್ತಾರೆ. ಆಗ ಅವರಿಗೆ ಸ್ಪಂದಿಸುವಂತಹ ಕೆಲಸ ಮಾಡುತ್ತಿದ್ದೇವೆ.

ಎಲ್ಲರೂ ಈ ಕೆಲಸದಲ್ಲಿ ಕೈ ಜೋಡಿಸಿದ್ದು, ವೈದ್ಯರ ತಂಡ ನನಗೆ ಅಗತ್ಯ ಸಲಹೆಗಳನ್ನು ನೀಡಿದೆ. ಅದರಂತೆ ಎಲ್ಲರಿಗೂ ಸರಳವಾಗಿ ಮನೆಯಲ್ಲೇ ಇದ್ದು ತಮ್ಮ ಆರೋಗ್ಯ ನೋಡಿಕೊಳ್ಳುವ ಕುರಿತಂತೆ ಮನವರಿಕೆ ಮಾಡುತ್ತಿದ್ದೇನೆ. ಇನ್ನು ಕೆಲವರು ಸೋಂಕಿನ ಲಕ್ಷಣ ಕಂಡುಬಂದರೆ ಮುಜುಗರಕ್ಕೊಳಗಾಗದೆ ವೈದ್ಯರನ್ನು ಭೇಟಿ ಮಾಡಬೇಕು. ಇದಕ್ಕೆ ಎಲ್ಲ ಅವಶ್ಯಕ ಕ್ರಮಗಳನ್ನು ಕೈಗೊಂಡಿದ್ದೇನೆ.

ಕೆಲವರು ಹೋಂ ಕ್ವಾರಂಟೈನ್‍ನಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಕೆಲವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುಣಮುಖರಾಗಿ ಮನೆಗೆ ತೆರಳುತ್ತಿದ್ದಾರೆ. ಬೆಡ್‍ಗಳ ಅಭಾವ ಪರಿಸ್ಥಿತಿ ಸದ್ಯಕ್ಕಿಲ್ಲ. ಆದರೆ, ವೆಂಟಿಲೇಟರ್‍ಗಳ ಸಮಸ್ಯೆ ಸ್ವಲ್ಪ ಮಟ್ಟಿಗೆ ಕಾಡಿದೆ. ಇನ್ನು ನಾಲ್ಕೈದು ದಿನಗಳಲ್ಲಿ ಎಲ್ಲ ಬಗೆಹರಿಯಲಿದೆ.

# ಆರೋಗ್ಯ ಕಿಟ್ ವಿತರಣೆ ಹೇಗೆ?
ಇದು ನನಗೆ ವೈದ್ಯರು ನೀಡಿದ ಸಲಹೆ. ಕ್ಷೇತ್ರದ ಜನತೆಗೆ ಆರೋಗ್ಯ ಕಿಟ್‍ಅನ್ನು ಈಗ ವಿತರಿಸುತ್ತಿದ್ದೇನೆ. ಸುಮಾರು 800ಕ್ಕೂ ಹೆಚ್ಚು ಕುಟುಂಬಗಳಿಗೆ ಇದನ್ನು ವಿತರಿಸಲಾಗಿದೆ. ಪಿಪಿಇ ಕಿಟ್, ಸ್ಯಾನಿಟೈಜರ್, ಹ್ಯಾಂಡ್‍ವಾಷ್, ಮಾತ್ರೆಗಳು, ಥರ್ಮಾಮೀಟರ್, ಮಾಸ್ಕ್ ಇತರೆ ವಸ್ತುಗಳನ್ನು ನೀಡಿದ್ದೇನೆ.

ಇದನ್ನು ಸೋಂಕಿನ ಲಕ್ಷಣಗಳು ಕಂಡುಬಂದವರಿಗೆ ವಿತರಿಸುತ್ತಿದ್ದೇವೆ. ಸದ್ಯದಲ್ಲೇ ಎಲ್ಲರಿಗೂ ಇದನ್ನು ವಿತರಿಸುವ ಯೋಜನೆ ಇದೆ ಎಂದು ತಿಳಿಸಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೂ ಇದರ ಬಗ್ಗೆ ತಿಳಿಸಿದ್ದೇನೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇನ್ನೊಂದು ವಾರದಲ್ಲಿ ಪರಿಸ್ಥಿತಿ ನೋಡಿಕೊಂಡು ವಿತರಿಸುವ ಆಲೋಚನೆ ಇದೆ ಎಂದು ತಿಳಿಸಿದ್ದಾರೆ.

# ನೀವು ಆರೋಗ್ಯ ಶಿಬಿರಗಳನ್ನು ಮಾಡುತ್ತಿದ್ದೀರಲ್ಲಾ, ಈಗ ಹೇಗಿದೆ?
ಕೊರೊನಾ ಹಿನ್ನೆಲೆಯಲ್ಲಿ ಜನ ಗುಂಪು ಸೇರಬಾರದೆಂಬ ಹಿನ್ನೆಲೆಯಲ್ಲಿ ಕಳೆದ ಮೂರ್ನಾಲ್ಕು ತಿಂಗಳಿನಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಆದರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ವಾರ್ಡ್ ಮಟ್ಟದ ಆಸ್ಪತ್ರೆಗಳಲ್ಲಿ ಈಗಲೂ ಕೂಡ ಚಿಕಿತ್ಸೆಗಳು ನಡೆಯುತ್ತಿವೆ.

ಮಹಾಲಕ್ಷ್ಮಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಕಳೆದು 10 ವರ್ಷಗಳಿಂದ ನಿರಂತರವಾಗಿ ಆರೋಗ್ಯ ಸೇವೆ ಮಾಡಿಕೊಂಡು ಬರಲಾಗುತ್ತಿದೆ. ಪರಿಸ್ಥಿತಿ ನೋಡಿಕೊಂಡು ಸದ್ಯದಲ್ಲೇ ಚಾಲನೆ ನೀಡಲಾಗುವುದು.

# ಹಾಸನದಲ್ಲಿ ಪರಿಸ್ಥಿತಿ ಹೇಗಿದೆ?
ಹಾಸನ ಜಿಲ್ಲೆಯಲ್ಲಿ ಜಿಲ್ಲಾಕಾರಿಗಳ ಮುಂದಾಳತ್ವದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಸಿಬ್ಬಂದಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಆದರೂ ಸೋಂಕಿತರ ಸಂಖ್ಯೆ ಏರಿಳಿತ ಕಾಣುತ್ತಿದೆ. ಗ್ರಾಮೀಣ ಪ್ರದೇಶಕ್ಕೆ ಇದು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಈಗಾಗಲೇ ನಮ್ಮ ಜಿಲ್ಲಾ ಪೊಲೀಸರು ಬೆಂಗಳೂರು ಸೇರಿದಂತೆ ಇತರೆ ಕಡೆಗಳಿಂದ ಬರುವಂತಹವರ ಮೇಲೆ ನಿಗಾ ಇರಿಸಿದ್ದಾರೆ. ಸೋಂಕಿತರು ಜಿಲ್ಲೆಗೆ ಬಂದು ಹರಡದಂತೆ ಎಲ್ಲ ಮುನ್ನೆಚ್ಚರಿಕೆ ವಹಿಸಲಾಗಿದೆ. ಜನರು ಕೂಡ ಜಾಗೃತರಾಗಿದ್ದಾರೆ. ಅವರಿಗೆ ಜಿಲ್ಲಾಡಳಿತದಿಂದ ಸಿಗಬೇಕಾದ ಎಲ್ಲ ನೆರವು ಕೂಡ ಕಲ್ಪಿಸಿಕೊಡಲಾಗುತ್ತಿದೆ.ತಾಲ್ಲೂಕು ಮಟ್ಟದಲ್ಲಿ ಆರೋಗ್ಯಾಕಾರಿಗಳು ಮತ್ತು ಆಶಾ ಕಾರ್ಯಕರ್ತೆಯರಿಗೆ ಹೆಚ್ಚಿನ ಜವಾಬ್ದಾರಿ ನೀಡಿ ಅವರಿಗೆ ಯಾವುದೇ ರೀತಿಯ ಮೂಲಭೂತ ಸೌಲಭ್ಯಗಳ ಕೊರತೆಯಾಗದಂತೆ ನೋಡಿಕೊಳ್ಳಲಾಗಿದೆ.

# ಆಶಾ ಕಾರ್ಯಕರ್ತೆಯರಿಗೆ ಉಚಿತ ಆಹಾರ ಕಿಟ್:
ಕೊರೊನಾ ಸಂಕಷ್ಟದ ಪರಿಸ್ಥಿತಿಯಲ್ಲಿ ಆಶಾ ಕಾರ್ಯಕರ್ತೆಯರಿಗೆ ಆಹಾರದ ಕಿಟ್‍ಗಳನ್ನು ಒದಗಿಸಲಾಗಿದೆ. ಅವರಿಗೆ ಗೌರವ ಧನವನ್ನು ಕೂಡ ನೀಡಿ ಅವರು ಸೇವೆ ಮುಂದುವರಿಸಿಕೊಂಡು ಹೋಗಲು ಎಲ್ಲ ರೀತಿಯ ಸಹಕಾರ ನೀಡಲಾಗುತ್ತಿದೆ.

# ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿದೆಯೆ?
ಸಾಮಾನ್ಯವಾಗಿ ಈಗ ಆಸ್ಪತ್ರೆಗಳಿಗೆ ಭೇಟಿ ನೀಡುತ್ತಿರುವವರು ಹೆಚ್ಚಾಗುತ್ತಿದ್ದಾರೆ. ನಾನು ಹೇಳುವುದೇನೆಂದರೆ ಉಸಿರಾಟದ ತೊಂದರೆ ಇರುವವರು ಆಸ್ಪತ್ರೆಗೆ ಬನ್ನಿ. ನೀವು ಸಾಮಾನ್ಯವಾಗಿದ್ದು, ರೋಗ ಲಕ್ಷಣಗಳಿದ್ದರೂ ಪರೀಕ್ಷೆ ಮಾಡಿಸಿಕೊಂಡು ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯಬಹುದು. ಬಿಬಿಎಂಪಿ ಸೇರಿದಂತೆ ಆರೋಗ್ಯ ಇಲಾಖೆಯವರು ತಮಗೆ ನೆರವು ನೀಡುತ್ತಾರೆ. ನೀವು ಅದನ್ನು ಪಾಲಿಸಿದರೆ ಖಂಡಿತ ಗುಣಮುಖರಾಗುತ್ತೀರಿ. ಜೀವಭಯದ ಆತಂಕವಿಲ್ಲದೆ ಆತ್ಮಸ್ಥೈರ್ಯದಿಂದ ಗಟ್ಟಿ ಯಾಗಿದ್ದು ಆರೋಗ್ಯವಂತ ಆಹಾರ ಪದ್ಧತಿಗಳನ್ನು ಅಳವಡಿಸಿಕೊಂಡು ಸುರಕ್ಷಿತ ವಾಗಿರಿ.

Facebook Comments

Sri Raghav

Admin