ಯಾವುದೇ ಜಿಲ್ಲೆಯ ಉಸ್ತುವಾರಿ ವಹಿಸಲು ಸಿದ್ಧ : ಸಚಿವ ಗೋಪಾಲಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು,ಫೆ.8- ಹಾಸನ ಸೇರಿದಂತೆ ರಾಜ್ಯದ ಯಾವುದೇ ಜಿಲ್ಲೆಯ ಉಸ್ತುವಾರಿಯನ್ನಾದರೂ ವಹಿಸಲು ತಾವು ಸಿದ್ಧ ಎಂದು ನೂತನ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಸಿದ್ದಗಂಗಾಮಠಕ್ಕೆ ನಿನ್ನೆ ಸಂಜೆ ಭೇಟಿ ನೀಡಿ ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ಮಠಾಧ್ಯಕ್ಷ ಸಿದ್ದಲಿಂಗ ಶ್ರೀಗಳ ಆಶೀರ್ವಾದ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಯಡಿಯೂರಪ್ಪ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ.

ಅವರು ಯಾವ ಜವಾಬ್ದಾರಿ ಕೊಟ್ಟರೂ ನಿರ್ವಹಿಸುತ್ತೇನೆ ಎಂದರು. ಕಳೆದ 5 ವರ್ಷಗಳಲ್ಲಿ ಮಹಾಲಕ್ಷ್ಮಿ ಲೇಔಟïನ್ನು ಯಾವ ರೀತಿ ಬದಲಾವಣೆ ಮಾಡಿದ್ದೇನೆಯೊ, ಅದೇ ರೀತಿ ಸಚಿವನಾಗಿ ಅತ್ಯಂತ ಜವಾಬ್ದಾರಿಯಿಂದ ಕೆಲಸ ಮಾಡುತ್ತೇನೆ. ಎಚ್.ವಿಶ್ವನಾಥ್ ಅವರಿಗೆ ಸ್ಥಾನಕಲ್ಪಿಸುವ ಕುರಿತು ಮುಖ್ಯಮಂತ್ರಿಗಳು ಈಗಾಗಲೇ ಮಾತಾನಾಡಿದ್ದಾರೆ. ಯಾರ ಮನಸ್ಸನ್ನೂ ನೋಯಿಸುವುದಿಲ್ಲ. ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬ ಭರವಸೆ ಇದೆ ಎಂದು ಹೇಳಿದರು.ನಾವು ಯಾರನ್ನು ಮೂಲೆಗುಂಪು ಮಾಡಿಲ್ಲ ಎಲ್ಲರೂ ಜೊತೆಯಲ್ಲಿ ಇದ್ದೇವೆ ಅನಗತ್ಯವಾಗಿ ಕೆಲವರು ಗೊಂದಲ ಸೃಷ್ಟಿಸುತ್ತಿದ್ದಾರೆ.

ಮಂಡ್ಯ ಬಿಜೆಪಿ ಭದ್ರಕೋಟೆ : ಇಷ್ಟು ದಿನ ಮಂಡ್ಯ ಜಿಲ್ಲೆ ಕಾಂಗ್ರೆಸ-ಜೆಡಿಎಸ್ ಭದ್ರಕೋಟೆಯಾಗಿತ್ತು. ಮುಂದಿನ ದಿನಗಳಲ್ಲಿ ಬಿಜೆಪಿ ಭದ್ರ ಕೋಟೆಯಾಗಲಿದೆ. ಮಂಡ್ಯದ ಸಕ್ಕರೆ ಕಾರ್ಖಾನೆ ಪುನರ್ ಆರಂಭಿಸುವ ಗುರಿಇದೆ. ಕಬ್ಬು ಬೆಳೆಯುವ ರೈತರಿಗೆ ಅನುಕೂಲ ಮಾಡಿಕೊಡುತ್ತೇನೆ ಎಂದು ನೂತನ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು.

ಬಿಜೆಪಿ ಕಛೇರಿಗೆ ಭೇಟಿ; ಸಚಿವ ಗೋಪಾಲಯ್ಯ ನಂತರ ತುಮಕೂರಿನ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿ ಜಿಲ್ಲಾ ಬಿಜೆಪಿ ನಾಯಕರ ಜೊತೆ ಮಾತುಕತೆ ನಡೆಸಿದರು. ನಂತರ ಸುದ್ದಿಗಾರರೋಮದಿಗೆ ಮಾತನಾಡಿ, ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸ್ವಂತ ಜಾಗದಲ್ಲಿ ಬಿಜೆಪಿ ಕಚೇರ್ನಿ ಹೊಂದಬೇಕೆಂಬ ಆಶಯವಿದ್ದು, ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಬಳಿ ಚರ್ಚಿಸುತ್ತೇನೆ ಎಂದರು. ಪಕ್ಷವನ್ನು ಸಂಘಟಿಸಿ ಮುನ್ನಡೆಸಬೇಕು ಎಂಬ ಹೆಬ್ಬಯಕೆ ಹೊಂದಿದ್ದು, ನನ್ನ ಕ್ಷೇತ್ರ ಸೇರಿದಂತೆ ಇಡೀ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ನಾವು ಶ್ರಮಿಸುತ್ತೇವೆ. ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಹೇಳಿದರು.

ನಾನು ನಿರಂತರವಾಗಿ ನಿಮ್ಮಗಳ ಕೆಲಸಕ್ಕೆ ಸ್ಪಂದಿಸುತ್ತೇನೆ ಎಂದು ಇದೇ ಸಂದರ್ಭದಲ್ಲಿ ಗೋಪಾಲ ಅವರು ಬಿಜೆಪಿ ಪಕ್ಷದ ಕಾರ್ಯಕರ್ತರಿಗೆ ಮನವರಿಕೆ ಮಾಡಿಕೊಟ್ಟರು.
ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್, ಮಾಜಿ ಸಚಿವ ಸೊಗಡು ಶಿವಣ್ಣ, ಬಯಲುಸೀಮೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಕಲ್ಲಹಳ್ಳಿದೇವರಾಜ, ಗೋಪಾಲಯ್ಯ ಪತ್ನಿ ಬಿಬಿಎಂಪಿ ಮಾಜಿ ಉಪಮೇಯರ್ ಹೇಮಲತಾ ಮತ್ತಿತರರು ಇದ್ದರು.

Facebook Comments