ಮೋದಿ ನಾಯಕತ್ವ ದೊರೆತಿರುವುದು ಭಾರತೀಯರ ಪುಣ್ಯ : ಸಚಿವ ಸುಧಾಕರ್

ಈ ಸುದ್ದಿಯನ್ನು ಶೇರ್ ಮಾಡಿ

ಚಿಕ್ಕಬಳ್ಳಾಪುರ : ಕರೋನಾ ತಂದೊಡ್ಡಿರುವ ಈ ಸಂಕಷ್ಟ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ದೊರೆತಿರುವುದು ಭಾರತೀಯರ ಪುಣ್ಯ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಬಣ್ಣಿಸಿದ್ದಾರೆ .

ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲರನ್ನೂ ಒಗ್ಗಟ್ಟಿನಿಂದ ಕರೆದೊಯ್ಯುವ ಸಮರ್ಥ ನಾಯಕತ್ವವನ್ನು ಮೋದಿ ದೇಶಕ್ಕೆ ನೀಡಿದ್ದಾರೆ ಎಂದು ನಗರದ ಒಕ್ಕಲಿಗರ ಭವನದಲ್ಲಿ ನಡೆದ ಕರೋನಾ ಯೋಧರ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಶನಿವಾರ ಮಾತನಾಡಿದರು .

ನಮ್ಮಲ್ಲಿ ಒಗ್ಗಟ್ಟು ಇದ್ದರೆ ಎಂತಹ ವೈರಾಣು ಬಂದರೂ ಅದನ್ನು ಹಿಮ್ಮೆಟ್ಟಿಸಬಹುದು ಅಂತಹ ಒಗ್ಗಟ್ಟನ್ನು ದೇಶ ಪ್ರದರ್ಶಿಸಿದೆ . ಅದಕ್ಕೆ ಮೋದಿಯವರ ಸಮರ್ಥ ನಾಯಕತ್ವ ಕಾರಣ ಎಂದರು.ಸತತವಾಗಿ ಎಲ್ಲ ರಾಜ್ಯಗಳ ಜೊತೆ ವಿಡಿಯೊ ಸಂವಾದದ ಮೂಲಕ ಮಾಹಿತಿ ತಿಳಿದುಕೊಂಡು ಸೂಕ್ತ ಮಾರ್ಗಸೂಚಿಗಳನ್ನು ನೀಡಿದರು .

ನಾನು ಸಹ ನಾಲ್ಕು ಸಂವಾದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದೆ ಅವರ ತಾಳ್ಮೆ ಮತ್ತು ಜಾಣ್ಮೆಯ ನಡೆ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದರು .ಸರ್ಕಾರದ ಜೊತೆಗೆ ಆಡಳಿತ ಶಾಹಿ ಕೈಜೋಡಿಸಿದಾಗ ಮಾತ್ರ ಯಾವುದೇ ನಿರ್ಧಾರಗಳ ಯಶಸ್ವಿ ಅನುಷ್ಠಾನ ಸಾಧ್ಯವಿದೆ . ಕರೋನಾ ವಿರುದ್ಧದ ಹೋರಾಟದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದು ಶ್ಲಾಘಿಸಿದರು .

ಜಿಲ್ಲಾಡಳಿತದ ಪರಿಶ್ರಮದಿಂದಲೇ ಕರೋನಾ ನಿಯಂತ್ರಣ ಸಾಧ್ಯವಾಗಿದೆ ಇದಕ್ಕಾಗಿ ಶ್ರಮಿಸಿದ ಎಲ್ಲರನ್ನೂ ನಾನು ಅಭಿನಂದಿಸುತ್ತೇನೆ ಎಂದರು . ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಶ್ರಮವನ್ನು ಮೆಚ್ಚಿ ಸಾರ್ವಜನಿಕರು ಅವರನ್ನು ಸನ್ಮಾನಿಸುತ್ತಿರುವುದು ವಿನೂತನವಾದ ಕಾರ್ಯಕ್ರಮ ಇದು ನನ್ನಲ್ಲಿ ಹೆಮ್ಮೆ ಮೂಡಿಸಿದೆ ಎಂದರು .

ಕಣ್ಣಿಗೆ ಕಾಣದ ವೈರಾಣು ಇಡೀ ಜಗತ್ತನ್ನು ಆವರಿಸಿ ಆತಂಕ ಮೂಡಿಸಿದೆ ದೊಡ್ಡ ದೊಡ್ಡ ರಾಷ್ಟ್ರಗಳೇ ಇದನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗದೆ ಪರಿತಪಿಸುತ್ತಿವೆ ಇಂತಹ ಸಂದರ್ಭದಲ್ಲಿ ಕೇಂದ್ರದಲ್ಲಿ ಮೋದಿ ಅವರ ನಾಯಕತ್ವ ಮತ್ತು ರಾಜ್ಯದಲ್ಲಿ ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಯಶಸ್ವಿಯಾಗಿ ನಿಭಾಯಿಸಿದ್ದೇವೆ ಎಂದರು .

ವಿದೇಶಗಳಲ್ಲಿ ರೋಗ ಕಾಣಿಸಿಕೊಂಡ ಬೆನ್ನಲ್ಲೇ ಮೊದಲು ಎಚ್ಚೆತ್ತುಕೊಂಡ ರಾಜ್ಯ ನಮ್ಮದು . ಜನದಟ್ಟಣೆ ಪ್ರದೇಶಗಳಲ್ಲಿ ಲಾಕ್ ಡೌನ್ ಜಾರಿಗೊಳಿಸಿದ ಮೊದಲ ರಾಜ್ಯ ಕರ್ನಾಟಕ ಹೀಗಾಗಿ ಸೋಂಕು ಹೆಚ್ಚು ಹರಡದಂತೆ ನೋಡಿಕೊಳ್ಳಲು ಸಾಧ್ಯವಾಯಿತು ಎಂದರು .

ಕಳೆದ ಎರಡು ಮೂರು ತಿಂಗಳಲ್ಲಿ ಬೇಕಾಗಿದ್ದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ ಮುಂದೆ ಎದುರಾಗುವ ಎಲ್ಲ ಸವಾಲುಗಳನ್ನು ಸಮರ್ಥವಾಗಿ ಎದುರಿಸಲಾಗುವುದು ಎಂದರು .

ಮುಂದಿನ ದಿನಗಳಲ್ಲಿ ಸಾರ್ವಜನಿಕರು ಸರ್ಕಾರದ ಸೂಚನೆಗಳ ಪ್ರಕಾರ ದೈನಂದಿನ ಚಟುವಟಿಕೆಗಳಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿಕೊಳ್ಳಬೇಕು , ಮಾಸ್ಕ್ ಧರಿಸುವುದು, ಶುಚಿತ್ವ ಕಾಯ್ದುಕೊಳ್ಳುವುದು, ಸಾಮಾಜಿಕ ಅಂತರ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸಲಹೆ ನೀಡಿದರು .

ಜಿಲ್ಲೆಯ ನಾಗರಿಕರ ವೇದಿಕೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂರಕ್ಕೂ ಹೆಚ್ಚು ಕರೋನಾ ಯೋಧರನ್ನು ಸನ್ಮಾನಿಸಲಾಯಿತು . ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಚಿಕ್ಕ ನರಸಿಂಹಯ್ಯ ,ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಇತರೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

# ಚಾಲನೆ :
ಇದಕ್ಕೂ ಮೊದಲು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಸ್ವಚ್ಛ ಭಾರತ್ ಮಿಷನ್ ಕಾರ್ಯಕ್ರಮದಡಿ ಗ್ರಾಮ ಪಂಚಾಯಿತಿಗಳಿಗೆ ತ್ಯಾಜ್ಯ ಸಾಗಾಣಿಕೆ ವಾಹನಗಳ ವಿತರಣೆ ಕಾರ್ಯಕ್ರಮವನ್ನು ಸಚಿವರು ಉದ್ಘಾಟಿಸಿದರು .

ಪ್ರಥಮ ಹಂತದಲ್ಲಿ ಜಿಲ್ಲೆಯ ಮೂವತ್ತು ಆರು ಗ್ರಾಮ ಪಂಚಾಯಿತಿಗಳಿಗೆ ತ್ಯಾಜ್ಯ ವಿಲೇವಾರಿ ವಾಹನಗಳನ್ನು ವಿತರಿಸಲಾಯಿತು . ಮುಂದಿನ ಹಂತದಲ್ಲಿ ಜಿಲ್ಲೆಯ ಎಲ್ಲ ನೂರ ಐವತ್ತು ಏಳು ಗ್ರಾಮ ಪಂಚಾಯಿತಿಗಳಿಗೆ ಇದನ್ನು ವಿತರಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಅವರು ತಿಳಿಸಿದರು .

ಪ್ರತಿ ಗ್ರಾಮ ಪಂಚಾಯಿತಿಗೆ ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ಇಪ್ಪತ್ತು ಲಕ್ಷ ರೂಗಳ ಅನುದಾನ ನಿಗದಿಪಡಿಸಲಾಗಿದೆ . ಅದು ಲಕ್ಷಗಳ ವೆಚ್ಚದಲ್ಲಿ ತ್ಯಾಜ್ಯ ವಿಲೇವಾರಿ ವಾಹನಗಳನ್ನು ವಿತರಿಸಲಾಗುತ್ತಿದೆ. ಜಿಲ್ಲೆಯ ಎಲ್ಲಾ ಪಂಚಾಯಿತಿಗಳಲ್ಲಿ ವೈಜ್ಞಾನಿಕ ರೀತಿಯಲ್ಲಿ ಘನತ್ಯಾಜ್ಯ ವಿಲೇವಾರಿಗೆ ತ್ಯಾಜ್ಯ ಘಟಕಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು .

Facebook Comments

Sri Raghav

Admin