ಶಾಸಕರಲ್ಲಿ ಅಸಮಾಧಾನಗಳಿದ್ದರೆ ವರಿಷ್ಠರು ಇತ್ಯರ್ಥಪಡಿಸುತ್ತಾರೆ : ಸಚಿವ ಈಶ್ವರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರ,ಆ.10-ಶಾಸಕರಲ್ಲಿ ಸಣ್ಣಪುಟ್ಟ ಅಸಮಾಧಾನಗಳಿದ್ದರೆ ಪಕ್ಷದ ವರಿಷ್ಠರು ಕರೆದು ಮಾತನಾಡಿ ಎಲ್ಲ ಸಮಸ್ಯೆಗಳನ್ನು ಇತ್ಯರ್ಥಪಡಿಸುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ರಾಜಕೀಯ ಪಕ್ಷವೆಂದ ಮೇಲೆ ಸಣ್ಣಪುಟ್ಟ ಗೊಂದಲಗಳು, ಅಸಮಾಧಾನ, ಭಿನ್ನಾಭಿಪ್ರಾಯ ಇದ್ದೇ ಇರುತ್ತದೆ. ನಮ್ಮ ಪಕ್ಷದ ವರಿಷ್ಠರು ಎಲ್ಲರ ಜೊತೆ ಮಾತನಾಡಿ ಬಿಕ್ಕಟ್ಟು ಪರಿಹರಿಸುತ್ತಾರೆ ಎಂದು ತಿಳಿಸಿದರು.

ಒಂದು ಕುಟುಂಬ ಎಂದ ಮೇಲೆ ಭಿನ್ನಾಭಿಪ್ರಾಯಗಳು ಎಲ್ಲಿ ಇರುವುದಿಲ್ಲ ಹೇಳಿ. ಅಣ್ಣತಮ್ಮಂದಿರ ನಡುವೆಯೇ ವ್ಯತ್ಯಾಸಗಳು ಆಗುತ್ತವೆ. ಇನ್ನು ಸಂಪುಟ ವಿಸ್ತರಣೆ ಸಂದರ್ಭದಲ್ಲಿ ವ್ಯತ್ಯಾಸಗಳಾಗುವುದು ಸರ್ವೇ ಸಾಮಾನ್ಯ. ನಮ್ಮದು ಬಲಿಷ್ಠ ರಾಜಕೀಯ ಪಕ್ಷವಾಗಿರುವುದರಿಂದ ಬಿಕ್ಕಟ್ಟು ಇತ್ಯರ್ಥವಾಗಲಿದೆ. ಈ ಬಗ್ಗೆ ಯಾರಿಗೂ ಯಾವುದೇ ರೀತಿಯ ಅನುಮಾನ ಬೇಡ ಎಂದು ಪ್ರತಿಪಕ್ಷಗಳ ಆರೋಪಕ್ಕೆ ಈಶ್ವರಪ್ಪ ತಿರುಗೇಟು ನೀಡಿದರು.

Facebook Comments