ಅ.9ಕ್ಕೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ರಾಜ್ಯಕ್ಕೆ ಭೇಟಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.4- ಬೆಂಗಳೂರು-ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರು ಅ.9 ಮತ್ತು 10 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವ ಸುಧಾಕರ್, ಆರೋಗ್ಯ ಇಲಾಖೆಗೆ ಸಂಬಂಸಿದ ಹಲವು ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದಿರಿಸಲಾಗಿದೆ.  ಈ ತಿಂಗಳು 9 ಮತ್ತು 10ರಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ರಾಜ್ಯಕ್ಕೆ ಬಂದು ಅವಲೋಕನ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಒಟ್ಟು 2,500ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ. ಮೊದಲ ಹಂತದಲ್ಲಿ 250 ಪ್ರಾಥಮಿಕ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲು ಯೋಜನೆ ರೂಪಿಸಲಾಗಿದೆ. ಇದರ ಜೊತೆಗೆ ಇನ್ನು 250 ಹೆಚ್ಚಿಸಲು ಕೇಂದ್ರದ ಸಹಾಯಕ ಕೇಳಲಾಗಿದೆ. ಒಂದು ಕೇಂದ್ರದಲ್ಲಿ ಒಬ್ಬರು ವೈದ್ಯರು ಇದ್ದರೆ, ಮೂರು ವೈದ್ಯರು ನಿಯೋಜನೆ ಮಾಡಲಾಗುತ್ತದೆ ಎಂದು ತಿಳಿಸಿದರು.

Facebook Comments