ಜನಪರ ಉತ್ಸವಕ್ಕೆ ಆಗಮಿಸದ ಸಾರ್ವಜನಿಕರು, ಅಧಿಕಾರಿಗಳ ಸಚಿವ ನಾಗೇಶ್ ವಿರುದ್ದ ಅಸಮಧಾನ

ಈ ಸುದ್ದಿಯನ್ನು ಶೇರ್ ಮಾಡಿ

ಬಂಗಾರಪೇಟೆ,ಫೆ.9- ಜನಪರ ಉತ್ಸವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸದಿರುವುದನ್ನು ಗಮನಿಸಿದ ಸಚಿವ ನಾಗೇಶ್ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.  ಪಟ್ಟಣದ ಬಿಇಓ ಕಛೇರಿ ಆವರಣದಲ್ಲಿ ಏರ್ಪಡಿಸಿದ್ದ ಜನಪರ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಅಧಿಕಾರಿಗಳು ಸರಿಯಾಗಿ ಪ್ರಚಾರ ಮಾಡದೆ ಇರುವುದರಿಂದ ಸಾರ್ವಜನಿಕರು ಕಾರ್ಯಕ್ರಮಕ್ಕೆ ಆಗಮಿಸಿಲ್ಲ.

ಸಚಿವರು, ಶಾಸಕರು, ಅಧಿಕಾರಿಗಳು ಬಂದರೆ ಮಾತ್ರ ಸಾಲದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಮುಂದೆ ನಡೆಯುವ ಕಾರ್ಯಕ್ರಮಗಳಲ್ಲಿ ಪ್ರಚಾರ ಮಾಡಿ ಸಾರ್ವಜನಿಕರು ಬರುವಂತೆ ಮಾಡಿ ಎಂದುಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಶಾಸಕ ಎಸ್.ಎನ್.ನಾರಾಯಣಸ್ವಾಮಿ ಮಾತನಾಡಿ, ಕಲಾವಿದರನ್ನು ಪ್ರತಿಯೊಬ್ಬರೂ ಪ್ರೋತ್ಸಾಹಿಸಿ ಗೌರವಿಸಬೇಕು. ಕಲಾವಿದರಿಗೆ ಯಾವುದೇ ಉದ್ಯೋಗ ಇಲ್ಲ.ಆಗಾಗಿ ಎಲ್ಲಾ ಕಲಾವಿದರನ್ನು ಗುರುತಿಸುವ ಕೆಲಸ ಆಗಬೇಕಾಗಿದೆ ಎಂದರು.

ಜಿಲ್ಲೆಯಲ್ಲಿರುವ ಕಲಾವಿದರ ಕಲೆಯನ್ನು ಗುರ್ತಿಸಿ ಮಾಶಾಸನ ಕೊಡಿಸುವ ಕೆಲಸ ಮಾಡಬೇಕೆಂದು ಮಂತ್ರಿಗಳನ್ನು ವೇದಿಕೆ ಮೇಲೆ ಆಗ್ರಹಪಡಿಸಿದರು.ಜಿಲ್ಲೆಯಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಮೂರ್ನಾಲ್ಕು ತಂಡಗಳನ್ನು ಕಳುಹಿಸಿ ಪ್ರೋತ್ಸಾಹ ನೀಡಬೇಕೆಂದು ಕನ್ನಡ, ಸಂಸ್ಕøತಿ ಇಲಾಖೆ ಅಧಿಕಾರಿಗಳಿಗೆ ಹೇಳಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ನಿರ್ದೇಶಕ ರವಿಕುಮಾರ್, ತಾಪಂ ಇಓ ವೆಂಕಟೇಶ್, ಪಿಎಸ್‍ಐ ಜಗದೀಶ್‍ರೆಡ್ಡಿ ಹಾಗೂ ಕಲಾತಂಡಗಳ ಪ್ರತಿನಿಧಿಗಳು ಇದ್ದರು.

Facebook Comments