ಬಿಜೆಪಿ ಸರ್ಕಾರದ 1 ವರ್ಷದ ಸಾಧನೆಯ ಕಿರುಹೊತ್ತಿಗೆ ಬಿಡುಗಡೆ ಮಾಡಿದ ಸಚಿವ ನಾರಾಯಣಗೌಡ

ಈ ಸುದ್ದಿಯನ್ನು ಶೇರ್ ಮಾಡಿ

ಮಂಡ್ಯ, 27 : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಳಿಸಿರುವ ಈ ಸುಸಂದರ್ಭದಲ್ಲಿ ಮೊದಲ ವರ್ಷದ ಪ್ರಧಾನ ಸಮಾರಂಭವು ನವತಂತ್ರಜ್ಞಾನದ ವರ್ಚುವಲ್ ಪ್ಲಾಟ್‍ಫಾರಂ ಮೂಲಕ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನ ನೇರ ಸಂವಾದವು ರಾಜ್ಯದ ಎಲ್ಲಾ ಜಿಲ್ಲೆಯ ಜಿಲ್ಲಾ ಪಂಚಾಯತ್‍ನಲ್ಲಿ ನಡೆಯಿತು ಮತ್ತು ರಾಜ್ಯದ ಎಲ್ಲಾ ವಿಭಾಗದ ಫಲಾನುಭವಿಗಳು ಮುಕ್ತವಾಗಿ ಮುಖ್ಯಮಂತ್ರಿಗಳ ನಡುವೆ ಸಂವಾದ ನಡೆಸಿದ ಸಂದರ್ಭದಲ್ಲಿ ಸರ್ಕಾರವು ಕೋವಿಡ್ ಸಮಯದಲ್ಲಿ ತೆಗೆದುಕೊಂಡ ಎಲ್ಲಾ ಕ್ರಮಗಳನ್ನು ಪ್ರಶಂಸಿದರು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ಜನರನ್ನು ಉದ್ದೇಶಿಸಿ ಕಳೆದ ಒಂದು ವರ್ಷದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳು ಮತ್ತು ಮುಂದೆ ಆಗಬೇಕಾದ ಕೆಲಸಗಳು ಸೇರಿದಂತೆ ಅನೇಕ ವಿಷಯಗಳ ಕುರಿತು ಮಾತನಾಡಿದರು ಮತ್ತು ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಅವರು ಸಂವಾದ ನಡೆಸಿ ಅವರಿಗೆ ಧೈರ್ಯ ತುಂಬಿ ಹಾಗೂ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಟ್ಟದಲ್ಲಿ ಅಭಿವೃದ್ಧಿಯನ್ನು ಮಾಡುತ್ತೇನೆ ಎಂದು ಹೇಳಿದರು.

ಜಿಲ್ಲೆಯ ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ನವತಂತ್ರಜ್ಞಾನದ ವರ್ಚುವಲ್ ಪ್ಲಾಟ್‍ಫಾರಂ ಮೂಲಕ ಕಾರ್ಯಕ್ರಮದಲ್ಲಿ ನೇರಪ್ರಸಾರದಲ್ಲಿ ಜಿಲ್ಲೆಯ ಫಲಾನುಭವಿಗಳಾದ ಸರ್ಕಾರಿ ನೌಕರರಾದ ಮಳವಳ್ಳಿ ತಾಲ್ಲೂಕಿನ ಸಿ.ಡಿ.ಪಿ.ಒ ಕುಮಾರ್ ಅವರು ಕೋವಿಡ್‍ನಿಂದ ಯಾರು ಹೇದರುವುದು ಬೇಡ ಆತ್ಮಸ್ಥೈರ್ಯದಿಂದ ಇದ್ದರೆ ಯಾವುದೇ ರೋಗವನ್ನು ಗೆಲ್ಲಬಹುದು ಮತ್ತು ನನಗೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ವರಿಷ್ಠಾಧಿಕಾರಿಗಳು ಎಲ್ಲಾ ರೀತಿಯ ಧೈರ್ಯವನ್ನು ತುಂಬಿ ನನ್ನ ಯೋಗಕ್ಷೇಮವನ್ನು ನಿತ್ಯ ವಿಚಾರಿಸುತ್ತಿದ್ದರು ಹಾಗೂ ವೈದ್ಯರು ಎಲ್ಲ ರೀತಿಯಲ್ಲೂ ಸ್ಪಂಧಿಸಿ ಎಲ್ಲರಿಗೂ ನಿತ್ಯವು ಉತ್ತಮವಾದ ಆಹಾರವನ್ನು ನೀಡುತ್ತಿದ್ದರು ಎಂದು ಹೇಳಿದರು.

ಇದೇ ಕಾರ್ಯಕ್ರಮದಲ್ಲಿ ಫಲಾನುಭವಿಗಳಾದ ನಾಗರಾಜು ಮತ್ತು ನಂಜುಂಡಸ್ವಾಮಿರವರು ಮಾತನಾಡಿ 2019 ರಲ್ಲಿ ಪ್ರವಾಹ ಪೀಡಿತರಾದ ನಾವು ಮನೆಯನ್ನು ಕಳೆದುಕೊಂಡಿದ್ದೆವು ಅಂದು ನಮ್ಮ ಜಿಲ್ಲಾಧಿಕಾರಿಗಳು ಮತ್ತು ತಾಲ್ಲೂಕು ದಂಡಾಧಿಕಾರಿಗಳು ನಮ್ಮ ಗ್ರಾಮಕ್ಕೆ ಭೇಟಿಕೊಟ್ಟು ಸ್ಥಳ ಪರಿಶೀಲಿಸಿ ನಮಗೆ ಮನೆ ನಿರ್ಮಾಣಮಾಡಲು ಕ್ರಮವಾಗಿ 5 ಲಕ್ಷವನ್ನು ನಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಿದರು ಅದರ ಫಲವಾಗಿ ಇಂದು ಅದೇ ಮನೆಯಲ್ಲಿ ಉತ್ತವಾದ ಜೀವನ ನಡೆಸಲು ಸಾಧ್ಯವಾಗಿದೆ ಎಂದು ಸಂವಾದದ ಸಮಯದಲ್ಲಿ ಪೌರಾಡಳಿತ, ತೋಟಗಾರಿಕೆ ಹಾಗೂ ರೇಷ್ಮೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವಾರದ ಡಾ| ನಾರಾಯಣಗೌಡ ಅವರ ಸಮ್ಮುಖದಲ್ಲಿ ಹೇಳಿದರು.

ಇದೇ ಸಂದರ್ಭದಲ್ಲಿ ಸರಕಾರದ ಒಂದು ವರ್ಷದ ಸಾಧನೆಗೆ ಸಂಬಂಧಿಸಿದಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಹೊರತಂದಿರುವ ಕಿರುಹೊತ್ತಿಗೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ| ನಾರಾಯಣಗೌಡ ಅವರು ಬಿಡುಗಡೆ ಮಾಡಿದರು. ಮುಖ್ಯಮಂತ್ರಿಗಳು ಈ ಸಂಕಷ್ಟದ ಸಂದರ್ಭಲ್ಲಿಯೂ ಒಂದು ವರ್ಷದ ಸಾಧನೆ ಅವಿಸ್ಮರಣೀಯ ಹಾಗೂ ಕೋವಿಡ್-19ಗೆ ಯಾರು ಕೂಡ ಹೆದರುವ ಅವಶ್ಯಕತೆ ಇಲ್ಲ, ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಮಾಸ್ಕ್ ಧರಿಸುವ ಮೂಲಕ ನಿಯಂತ್ರಿಸಬಹುದು.

ಜಿಲ್ಲಾಧಿಕಾರಿಗಳು ವೈದ್ಯರು ಆಗಿರುವುದರಿಂದ ಜಿಲ್ಲೆಯಲ್ಲಿ ಉತ್ತಮವಾದ ವ್ಯವಸ್ಥೆಯನ್ನು ಕೈಗೊಂಡಿದ್ದಾರೆ ಮತ್ತು ಇಂದಿನ ಕಾರ್ಯಕ್ರಮವನ್ನು ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಯಶಸ್ವಿಯಾಗಿ ನಡೆಸಿದೆ ಎಂದು ಪ್ರಶಂಸಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಡಾ.ಎಂ.ವಿ.ವೆಂಕಟೇಶ್, ಜಿಲ್ಲಾ ಪಂಚಾಯತ್‍ನ ಸಿ.ಇ.ಓ ಜುಲ್ಫಿಕರ್ ಅಹಮದ್, ಸಾರ್ವಜನಿಕ ಮತ್ತು ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ.ಕೆ.ಹರೀಶ್, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳಾದ ಪರಶುರಾಮ್ ಮತ್ತು ಅಪರ ಜಿಲ್ಲಾಧಿಕಾರಿಗಳಾದ ಶೈಲಜಾ ಹಾಗೂ ಆಯ್ದ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Facebook Comments

Sri Raghav

Admin