ರೇಷ್ಮೆ ಬೆಳೆಗಾರರ ಖಾತೆಗೆ ಹಣ ಜಮೆ ಆಗದಿದ್ದರೆ ಶಿಸ್ತು ಕ್ರಮ : ಅಧಿಕಾರಿಗಳಿಗೆ ಸಚಿವರ ವಾರ್ನಿಂಗ್

ಈ ಸುದ್ದಿಯನ್ನು ಶೇರ್ ಮಾಡಿ

ಕೋಲಾರ, ಸೆ.15- ವಾರದೊಳಗೆ ರೇಷ್ಮೆ ಬೆಳೆಗಾರರ ಖಾತೆಗೆ ಬೆಂಬಲ ಬೆಲೆ ಹಣ ಜಮಾ ಆಗಬೇಕು, ಇಲ್ಲದಿದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕೋಲಾರ ರೇಷ್ಮೆ ಇಲಾಖೆ ಜಂಟಿ ನಿರ್ದೇಶಕರಾದ ಆಂಜನೇಯ ಗೌಡ ಅವರಿಗೆ ರೇಷ್ಮೆ ಇಲಾಖೆ ಸಚಿವ ನಾರಾಯಣಗೌಡ ಎಚ್ಚರಿಕೆ ನೀಡಿದರು.

ಜಿಲ್ಲೆಯ ಶ್ರೀನಿವಾಸಪುರದ ತೋಟಗಾರಿಕೆ ಕ್ಷೇತ್ರದ ಮಾವು ಉತ್ಕøಷ್ಟ ಕೇಂದ್ರಕ್ಕೆ ಭೇಟಿ ನೀಡಿದ ಬಳಿಕ ಸಚಿವರು ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಬೇರೆ ಎಲ್ಲಾ ಕಡೆ ಹಣ ಸಂದಾಯ ಆಗಿದೆ.

ರೈತರು ಅಭಿನಂದನೆ ಕೂಡ ಸಲ್ಲಿಸಿದ್ದಾರೆ. ಆದರೆ ಕೋಲಾರದಲ್ಲಿ ಮಾತ್ರ ಯಾಕೆ ವಿಳಂಬ ಆಗಿದೆ. ತಕ್ಷಣ ಸಮಸ್ಯೆ ಪರಿಹಾರ ಆಗದಿದಲ್ಲಿ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದರು.

ಲಾಕ್ ಡೌನ್ ಸಂದರ್ಭದಲ್ಲಿ ಹಣ್ಣು, ತರಕಾರಿ, ಹೂವು ಮಾರಾಟವಾಗದೆ ನಷ್ಟವಾಗಿತ್ತು. ಸರ್ಕಾರ ಪರಿಹಾರ ಘೋಷಣೆ ಮಾಡಿದೆ. ಕೆಲವು ಕಡೆ ತಾಂತ್ರಿಕ ಕಾರಣದಿಂದ ರೈತರ ಖಾತೆಗೆ ಹಣ ಜಮೆ ಆಗಿಲ್ಲ. ಅಕಾರಿಗಳು ಎಲ್ಲಾ ಸಮಸ್ಯೆ ಸರಿಪಡಿಸಬೇಕು. ವಾರದೊಳಗೆ ಪರಿಹಾರ ಹಣ ಸಂದಾಯ ಆಗಬೇಕು ಎಂದು ಸೂಚನೆ ನೀಡಿದ್ದಾರೆ.

ಮ್ಯಾಂಗೊ ಬೋರ್ಡ್‍ಗೆ 25 ಕೋಟಿ ರೂ. ವಾರ್ಷಿಕ ಅನುದಾನ ನೀಡುವ ಬಗ್ಗೆ ಚರ್ಚಿಸುವುದಾಗಿ ತಿಳಿಸಿದ ಸಚಿವರು, ಡ್ರಿಪ್ ಇರಿಗೇಷನ್‍ಗೆ ಶೇ. 100ರಷ್ಟು ಸಬ್ಸಿಡಿ ನೀಡಿವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಮಾತನಾಡುವುದಾಗಿ ತಿಳಿಸಿದರು.

ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ನಾಗೇಶ್ ಮಾತನಾಡಿ, ಕರೋನಾ ಲಾಕ್‍ಡೌನ್ ಸಂದರ್ಭದಲ್ಲಿ ರೈತರ ಮಾವನ್ನು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಮಾರಾಟ ಮಾಡಿಸಲಾಯಿತು. ಜಿಲ್ಲೆಯಲ್ಲಿ ಹಲವು ಪ್ರಸಿದ್ದ ತಳಿಯ ಮಾವನ್ನು ಬೆಳೆಯಲಾಗುತ್ತಿದ್ದು, ದೇಶ ವಿದೇಶಗಳಿಗೆ ರಪ್ತು ಹೆಚ್ಚಿಸಬೇಕು ಆಗ ಉತ್ತಮವಾದ ಬೆಲೆ ಸಿಗುತ್ತದೆ ಎಂದು ತಿಳಿಸಿದರು.

ವಿದಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಮಾತನಾಡಿ, ರಾಜ್ಯದಲ್ಲಿ ಬೆಳೆಯುವ ಒಟ್ಟು ಮಾವಿನಲ್ಲಿ ಶೇ 34 ರಷ್ಟು ಮಾವನ್ನು ಕೋಲಾರ ಜಿಲ್ಲೆಯಲ್ಲಿಯೇ ಬೆಳೆಯಲಾಗುತ್ತದೆ.

ಮಾವು ಮಂಡಳಿಯು ಇಡಿ ರಾಜ್ಯಕ್ಕೆ ಸಂಬಂದಿಸಿದ್ದಾಗಿದ್ದು, ವಾರ್ಷಿಕ 2 ಕೋಟಿ ಅನುದಾನ ಸಾಲುವುದಿಲ್ಲ. ಆದ್ದರಿಂದ ಕನಿಷ್ಠ 25 ಕೋಟಿ ಅನುದಾನ ನೀಡಬೇಕು ಎಂದು ಸಚಿವರಲ್ಲಿ ಮನವಿ
ಮಾಡಿದರು.

ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಗಾಯಿತ್ರಿ, ಮಾವು ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಾದ ನಾಗರಾಜ್ ಅವರು ಸೇರಿದಂತೆ ವಿವಿದ ಇಲಾಖೆಯ ಅಕಾರಿಗಳು ಉಪಸ್ಥಿತರಿದ್ದರು.

Facebook Comments

Sri Raghav

Admin