ಫಲಿತಾಂಶಕ್ಕೆಕ್ಕೂ ಮುನ್ನವೇ ಕಾಂಗ್ರೆಸ್ ಸೋಲೊಪ್ಪಿಕೊಂಡಿದೆ : ಸಚಿವ ಸೋಮಶೇಖರ್ 

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ನ.4- ಬೆಂಗಳೂರಿನ ರಾಜರಾಜೇಶ್ವರಿನಗರ ಹಾಗೂ ತುಮಕೂರಿನ ಶಿರಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ. ಇದರಲ್ಲಿ ಯಾವುದೇ ಅನುಮಾನ ಬೇಡ. ಈಗಾಗಲೇ ಮತಪೆಟ್ಟಿಗೆ ಬಗ್ಗೆ ಅಪರಸ್ವರ ಎತ್ತುವ ಮೂಲಕ ಶಿರಾ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಫಲಿತಾಂಶಕ್ಕೂ ಮುನ್ನವೇ ಸೋಲೊಪ್ಪಿಕೊಂಡಿದ್ದಾರೆ ಎಂದು ಸಹಕಾರ ಹಾಗೂ ಜಿಲ್ಲಾಉಸ್ತುವಾರು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜರಾಜೇಶ್ವರಿನಗರದಲ್ಲಿ ಶೇಕಡವಾರು ಮತದಾನ ಕಡಿಮೆಯಾದರೂ ಬಿಜೆಪಿ ಗೆಲುವು ನಿಶ್ಚಿತ. ಮುನಿರತ್ನ ಅವರ ಅಭಿವೃದ್ಧಿ ಕಾರ್ಯಗಳು ನಮಗೆ ಗೆಲುವು ತಂದುಕೊಡಲಿದೆ ಎಂದು ತಿಳಿಸಿದರು.

ಮೈಸೂರು ದಸರಾದಂತೆ ಪಂಚಲಿಂಗ ದರ್ಶನ ಮಹೋತ್ಸವವನ್ನು ಸರಳವಾಗಿ ಆಚರಿಸಬೇಕೆಂಬುದು ಸರ್ಕಾರದ ಉದ್ದೇಶವಾಗಿದೆ.ಹಾಗಾಗಿ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಹೈಕೋರ್ಟ್ ಆದೇಶದಂತೆ ಸಹಕಾರ ಸಂಸ್ಥೆಗಳ ಚುನಾವಣೆ ನಡೆಯಲಿದೆ. ಡಿಸೆಂಬರ್‍ನಲ್ಲಿ ಜನರಲ್ ಬಾಡಿ ಸಭೆ ನಿಗದಿಪಡಿಸಲಾಗಿದೆ ಎಂದು ತಿಳಿಸಿದರು. ಚಾಮರಾಜ ವಿಧಾನಸಭಾ ಕ್ಷೇತ್ರದ ಕೆ.ಆರ್.ಎಸ್.ಮುಖ್ಯರಸ್ತೆಯಿಂದ ಸೂರ್ಯ ಬೇಕರಿ ರಸ್ತೆವರೆಗೆ 1.99ಕೋಟಿ ವೆಚ್ಚದ ಡಾಂಬರಿಕರಣ ಕಾಮಗಾರಿಗೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದು ಇದೇ ವೇಳೆ ಸೋಮಶೇಖರ್ ಹೇಳಿದರು.

Facebook Comments