ಸಚಿವ ಸೋಮಶೇಖರ್‌ಗೆ ರೈತರಿಂದ ಘೇರಾವ್

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಸೆ.19- ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಎಪಿಎಂಸಿ ಕಾಯ್ದೆ ತಿದ್ದುಪಡಿ ಅಂಗೀಕರಿಸಬಾರದೆಂದು ಒತ್ತಾಯಿಸಿ ರೈತರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರಿಗೆ ಘೇರಾವ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.

ನಗರದಲ್ಲಿಂದು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬಂದಿದ್ದ ಸಚಿವ ಸೋಮಶೇಖರ ಅವರಿಗೆ ರೈತರು ಘೇರಾವ್ ಮಾಡಿ ನಮ್ಮ ನೆರವಿಗೆ ಬರಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸೋಮಶೇಖರ್ ಚರ್ಚಿಸಲು ರೈತ ಮುಖಂಡರ ಸಭೆಯನ್ನು ಇದೇ 26ರಂದು ಕರೆಯಲಾಗಿದೆ.

ಇದನ್ನು ತಿಳಿಸಲೆಂದೇ ಇಲ್ಲಿಗೆ ಬಂದಿದ್ದೆ. ಅಷ್ಟರಲ್ಲೇ ನೀವು ನನ್ನನ್ನು ಘೇರಾವ್ ಮಾಡಿದ್ದೀರಿ ಎಂದರು. ಸೆ.21ರಿಂದ ಅಧಿವೇಶನ ಪ್ರಾರಂಭವಾಗಲಿದೆ. ಬಿಲ್‍ಗಳು ಪಾಸಾದ ಮೇಲೆ ನಮ್ಮೊಂದಿಗೆ ಚರ್ಚೆಗೆ ಬಂದರೆ ಏನು ಪ್ರಯೋಜನ? ನಮಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿ ಆ ನಂತರ ಅಧಿವೇಶನದಲ್ಲಿ ಬಿಲ್‍ಗಳನ್ನು ಪಾಸ್ ಮಾಡಬಹುದಿತ್ತು ಎಂದು ಬೇಸರ ವ್ಯಕ್ತಪಡಿಸಿದರು.

ವಿಧೇಯಕಗಳನ್ನು ಬದಲಾವಣೆ ಮಾಡಲು ಸಾಧ್ಯವಿದೆ. ಹಾಗಾಗಿ 26ರಂದು ನಿಮ್ಮೆಲ್ಲರೊಂದಿಗೆ ಚರ್ಚಿಸಿಯೇ ಮುಂದಿನ ಕ್ರಮ ಕೈಗೊಳ್ಳುವುದಾಗಿ ಸೋಮಶೇಖರ್ ಭರವಸೆ ನೀಡಿದರು. ಜಿಲ್ಲೆಯಲ್ಲಿ ರಸಗೊಬ್ಬರದ ಸಮಸ್ಯೆ ಇಲ್ಲ. ಎಲ್ಲಾ ರೈತರಿಗೆ ಅಗತ್ಯವಿರುವಷ್ಟು ರಸಗೊಬ್ಬರ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಒಂದು ವೇಳೆ ಎಲ್ಲಾದರೂ ಸಮಸ್ಯೆ ಕಂಡು ಬಂದರೆ ತಕ್ಷಣ ನನ್ನ ಗಮನಕ್ಕೆ ತನ್ನಿ ಕೂಡಲೇ ಪರಿಹರಿಸುತ್ತೇನೆ ಎಂದು ರೈತರಿಗೆ ಸಚಿವರು ಭರವಸೆ ನೀಡಿದರು.

Facebook Comments