ರಾಜ್ಯಾದ್ಯಂತ ಇಂದು ಶೋಕಾಚರಣೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.24- ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ನಿಧನದ ಗೌರವಾರ್ಥ ರಾಜ್ಯ ಸರ್ಕಾರ ಇಂದು ರಾಜ್ಯಾದ್ಯಂತ ಶೋಕಾಚರಣೆ ಘೋಷಣೆ ಮಾಡಿದೆ. ಸುರೇಶ್ ಅಂಗಡಿ ಅವರ ನಿಧನಕ್ಕೆ ಸರ್ಕಾರ ತೀವ್ರ ಸಂತಾಪ ಸೂಚಿಸಿದ್ದು , ಇಂದು ರಾಜ್ಯಾದ್ಯಂತ ಶೋಕಾಚರಣೆ ಘೋಷಣೆ ಮಾಡಿದೆ.

ಈ ಸಂದರ್ಭದಲ್ಲಿ ಯಾವುದೇ ಮನರಂಜನಾ ಕಾರ್ಯ ಕ್ರಮಗಳು ಇರುವುದಿಲ್ಲ. ನಿಯಮಿತವಾಗಿ ಹಾರಿಸಲ್ಪಡುವ ರಾಷ್ಟ್ರ ಧ್ವಜವನ್ನು ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

Facebook Comments