ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ವರ್ಷದಲ್ಲಿ 2ನೇ ಸೆಟ್ ಸಮವಸ್ತ್ರ ವಿತರಣೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.27- ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಎರಡನೆ ಬಾರಿಗೆ ಸಮವಸ್ತ್ರಗಳನ್ನು ವಿತರಿ ಸಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‍ಕುಮಾರ್ ತಿಳಿಸಿದ್ದಾರೆ.

ನಿನ್ನೆ ಪತ್ರಿಕಾಗೋಷ್ಠಿ ವೇಳೆ ಈ ಬಗ್ಗೆ ಕೆಲ ವ್ಯತ್ಯಯ ಹೇಳಿಕೆ ಹೊರ ಬಂದಿದ್ದು , ಅದಕ್ಕಾಗಿ ಸ್ಪಷ್ಟೀಕರಣ ನೀಡುತ್ತಿದ್ದು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲೇ ಎರಡನೆ ಸೆಟ್ ಸಮವಸ್ತ್ರಗಳನ್ನು ವಿದ್ಯಾರ್ಥಿಗಳಿಗೆ ನೀಡಲು ಅಧಿಕಾರಿಗಳೊಂದಿಗೆ ಕೂಲಂಕಷವಾಗಿ ಚರ್ಚೆ ನಡೆಸ ಲಾಗಿದೆ.

ಈಗಾಗಲೇ ಇದರ ಪ್ರಸ್ತಾಪವನ್ನು ಸಿಎಂ ಗಮನಕ್ಕೂ ತರಲಾಗಿದ್ದು, ಹಣಕಾಸು ಇಲಾಖೆಯ ಅನುಮತಿಗಾಗಿ ಕಾಯಲಾಗುತ್ತಿದೆ. ಅನುಮತಿ ಸಿಗುವ ವಿಶ್ವಾಸವಿದ್ದು ಈ ಪ್ರಕ್ರಿಯೆ ಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಸುರೇಶ್‍ಕುಮಾರ್ ತಿಳಿಸಿದ್ದಾರೆ.

Facebook Comments