ಅಪ್ರಾಪ್ತರಿಂದ 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಈ ಸುದ್ದಿಯನ್ನು ಶೇರ್ ಮಾಡಿ

ಮುಂಬೈ,ನ.21- ಇಬ್ಬರು ಅಪ್ರಾಪ್ತ ಬಾಲಕರಿಂದ 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂಬ ದೂರು ಬಂದಿದ್ದು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.  ಘಟನೆ ವರದಿಯಾದ ಕೂಡಲೇ ಪೊಲೀಸರು ಅವರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಕಸ್ತೂರ್‍ಬಾ ಮಾರ್ಗ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಇನ್ಸ್‍ಪೆಕ್ಟರ್ ತಿಳಿಸಿದ್ದಾರೆ.

ಈ ತಿಂಗಳ ಆರಂಭದಲ್ಲಿ, ಮಹಾರಾಷ್ಟ್ರದಿಂದ ಇದೇ ರೀತಿಯ ಸಾಮೂಹಿಕ ಅತ್ಯಾಚಾರ ಘಟನೆ ವರದಿಯಾಗುತ್ತಿರುವುದು ಬೆಚ್ಚಿ ಬೀಳಿಸಿದೆ.
ಜಲ್ಗಾಂವ್ ಜಿಲ್ಲೆಯಲ್ಲಿ 20 ವರ್ಷದ ಯುವತಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಮಾಡಿ, ವಿಷ ನೀಡಿ ಕೊಲೆ ಮಾಡಲಾಗಿತ್ತು. ಆಕೆ ನಾಪತ್ತೆಯಾಗಿದ್ದಾಳೆ ಎಂದು ಸಂತ್ರಸ್ತೆಯ ಕುಟುಂಬ ಸದಸ್ಯರು ಪೊಲೀಸರಿಗೆ ಮಾಹಿತಿ ನೀಡಿದಾಗ ಈ ಘಟನೆ ಬೆಳಕಿಗೆ ಬಂದಿತ್ತು.

ಕುಟುಂಬದ ಪ್ರಕಾರ, ಮಹಿಳೆಯನ್ನು ವಿಷಪ್ರಾಶನ ಮಾಡುವ ಮೊದಲು ಕೆಲವು ಪುರುಷರು ಅಪಹರಿಸಿ ಸಾಮೂಹಿಕ ಅತ್ಯಾಚಾರ ಮಾಡಿದ್ದರು ಎಂಬುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಕ್ಟೋಬರ್‍ನಲ್ಲಿ, ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಬಾಲಕ 15 ವರ್ಷದ ಬಾಲಕಿಯನ್ನು ಭಿವಾಂಡಿ ಪಟ್ಟಣದ ತನ್ನ ಮನೆಗೆ ಕರೆದುಕೊಂಡು 16 ವರ್ಷದ ಬಾಲಕ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Facebook Comments