ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ : ತನಿಖೆಗೆ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಫೆ.2-ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಆರೋಪ ಪ್ರಕರಣವನ್ನು ಕಟ್ಟುನಿಟ್ಟಾಗಿ ಕಾನೂನಾತ್ಮಕವಾಗಿ ತನಿಖೆ ಮಾಡಲು ಪೊಲೀಸರಿಗೆ ಸೂಚಿಸಿರುವುದಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ವಿಧಾನಸಭೆಗೆ ತಿಳಿಸಿದರು. ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಅವರು ಪ್ರಸ್ತಾಪಿಸಿದ ವಿಚಾರಕ್ಕೆ ಉತ್ತರಿಸಿದ ಗೃಹಸಚಿವರು, ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ವೆಸಗಿರುವುದು ಅತ್ಯಂತ ಹೇಯಕೃತ್ಯ. ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು.

ಈ ವಿಚಾರದಲ್ಲಿ ಯಾವುದೇ ಪ್ರಭಾವಕ್ಕೊಳಗಾಗಿಲ್ಲ. ಯಾರೂ ಪೋನ್ ಮಾಡಿಲ್ಲ. ಪೊಲೀಸರು ಅವರ ಕೆಲಸ ಮಾಡುತ್ತಾರೆ. ಕಾನೂನಾತ್ಮಕವಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲು ಕ್ರಮ ಕೈಗೊಳ್ಳುತ್ತಾರೆ. 17 ಜನರ ಮೇಲೆ ಪ್ರಕರಣ ದಾಖಲಾಗಿದೆ. ನಿಷ್ಪಕ್ಷಪಾತ ತನಿಖೆಯಾಗಲಿದೆ. ಈ ಬ್‍ಗೆ ಜಿಲ್ಲಾ ಎಸ್ಪಿಗೆ ಮೇಲ್ವಿಚಾರಣೆ ನಡೆಸಲು ಸೂಚನೆ ನೀಡಲಾಗಿದೆ ಎಂದರು. ಮತ್ತೆ ರಾಜೇಗೌಡ ಮಾತನಾಡಿ, ಅಮಾಯಕ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ, ಕೊಲೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಿಗೆ ನ್ಯಾಯಾಲಯ ಮರಣದಂಡನೆ ವಿಧಿಸಿದೆ.

ಈ ಘಟನೆ ಹಸಿರಾಗಿರುವಾಗಲೇ ಅಪ್ರಾಪ್ತೆ ಮೇಲೆ 17 ಮಂದಿ ಅತ್ಯಾಚಾರ ವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಎಲ್ಲರ ಮೇಲೆ ಪ್ರಕರಣ ದಾಖಲಾಗಿದೆ. ತಪ್ಪಿತಸ್ಥರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

Facebook Comments