ಶಾಸಕ ಜಮೀರ್ ಅಹಮ್ಮದ್ ಆಪ್ತ ಕೊರೊನಾಗೆ ಬಲಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜು.10- ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಖಾನ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ವ್ಯಕ್ತಿಯೊಬ್ಬರು ಕೊರೊನಾ ಸೋಂಕು ತಗುಲಿ ಸಾವನ್ನಪ್ಪಿದ್ದಾರೆ.

ರಾಯಪುರ ವಾರ್ಡ್‍ನಲ್ಲಿ ಕಾಂಗ್ರೆಸ್ ಮುಖಂಡರಾಗಿ ಗುರುತಿಸಿಕೊಂಡಿದ್ದ 55 ವರ್ಷದ ಈ ವ್ಯಕ್ತಿಗೆ ಕಳೆದೊಂದು ವಾರದ ಹಿಂದೆ ಸೋಂಕು ತಗುಲಿತ್ತು. ಆಸ್ಪತ್ರೆಗೆ ದಾಖಲಾಗಿದ್ದ ಇವರು ಉಸಿರಾಟದ ತೊಂದರೆ ತೀವ್ರಗೊಂಡು ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಚಾಮರಾಜಪೇಟೆ ಭಾಗದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಾಗಿದ್ದು, ಹಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಇಂದು ಒಬ್ಬರು ಮೃತಪಟ್ಟಿರುವುದು ಆತಂಕವನ್ನು ಹೆಚ್ಚಿಸಿದೆ.

Facebook Comments