ಶಾಸಕ ಹಾಲಪ್ಪ ಮತ್ತೆ ಆಸ್ಪತ್ರೆಗೆ ದಾಖಲು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.8- ಕೊರೊನಾ ಸೋಂಕಿನಿಂದ ಗುಣಮುಖರಾಗಿ ಮನೆಗೆ ಹಿಂದಿರುಗಿದ್ದ ಸಾಗರ ಶಾಸಕ ಹರತಾಳು ಹಾಲಪ್ಪ ಅನಾರೋಗ್ಯದ ಕಾರಣ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊರೊನಾದಿಂದ ಗುಣಮುಖರಾಗಿ ಆಗಸ್ಟ್ 11ರಂದು ಬಿಡುಗಡೆಗೊಂಡಿದ್ದ ಹಾಲಪ್ಪ ಹೋಂಕ್ವಾರಂಟೈನ್ ಮುಗಿಸಿದ್ದರು. ನಂತರ ಕ್ಷೇತ್ರದಲ್ಲಿ ಸುತ್ತಾಟ ಪ್ರಾರಂಭಿಸಿದ್ದರು.

ನಿನ್ನೆ ಮಧ್ಯಾಹ್ನ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಕಾರಣ ಬೆಂಗಳೂರಿಗೆ ವಾಪಸ್ ಆಗಿ ಅಲ್ಲಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಆರೋಗ್ಯ ಸ್ಥಿರವಾಗಿದ್ದು, ಯಾರೂ ಗಾಬರಿಯಾಗುವ ಅವಶ್ಯಕತೆ ಇಲ್ಲ ಎಂದು ಮೂಲಗಳು ತಿಳಿಸಿವೆ.

Facebook Comments