ಬಾಯಲ್ಲಿ ನಿಂಬೆಹಣ್ಣು ಇಟ್ಟುಕೊಂಡು ಗಣಪತಿ ವಿಸರ್ಜನೆ ವೇಳೆ ಎಂಟಿಬಿ ಡ್ಯಾನ್ಸ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಸೆ.17- ಅನರ್ಹ ಶಾಸಕ ಎಂ.ಟಿ.ಬಿ.ನಾಗರಾಜ್ ಇಂದು ಗಣಪತಿ ವಿಸರ್ಜನೆ ವೇಳೆ ಬಾಯಲ್ಲಿ ನಿಂಬೆಹಣ್ಣು ಇಟ್ಟುಕೊಂಡು ಡ್ಯಾನ್ಸ್ ಮಾಡುವ ಮೂಲಕ ಗಮನಸೆಳೆದಿದ್ದಾರೆ.

ದೇವನಹಳ್ಳಿ ತಾಲ್ಲೂಕಿನ ಸೂಲಿಬೆಲೆಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಎಂಟಿಬಿ ನಾಗರಾಜ್, ವಾದ್ಯನಾದಗಳಿಂದ ಪ್ರಚೋದಿತರಾಗಿ ನೃತ್ಯ ಮಾಡಲಾರಂಭಿಸಿದರು.

ನೃತ್ಯದ ವೇಳೆ ತಮ್ಮ ಬಾಯಿಯಲ್ಲಿ ನಿಂಬೆಹಣ್ಣು ಕಚ್ಚಿಕೊಂಡಿದ್ದು ವಿಶೇಷವಾಗಿತ್ತು. ಸುಮಾರು ಐದಾರು ನಿಮಿಷ ನೃತ್ಯ ಮಾಡಿದ ಮಾಜಿ ಸಚಿವರು ಎಲ್ಲರ ಗಮನಸೆಳೆದರು.ಈ ಹಿಂದೆ ಇದೇ ರೀತಿ ಸಾರ್ವಜನಿಕವಾಗಿ ನೃತ್ಯ ಮಾಡುವ ಮೂಲಕ ಎಂ.ಟಿ.ಬಿ.ನಾಗರಾಜ್ ಅವರು ಚರ್ಚೆಗೆ ಗ್ರಾಸವಾಗಿದ್ದರು.

ಇದಕ್ಕೂ ಮುನ್ನ ಹೊಸಕೋಟೆ ತಾಲ್ಲೂಕಿನ ಕಾಳಪ್ಪನಹಳ್ಳಿಯ ಭದ್ರಕಾಳಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ವರವ ಕೊಡೆ ಚಾಮುಂಡಿ ಭಜನಾ ಗೀತೆಯನ್ನು ಹಾಡಿ ಪ್ರಾರ್ಥನೆ ಸಲ್ಲಿಸಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin