ವರಿಷ್ಠರು ಸಮಸ್ಯೆ ಬಗೆಹರಿಸುತ್ತಾರೆ: ನಾಗೇಂದ್ರ

ಈ ಸುದ್ದಿಯನ್ನು ಶೇರ್ ಮಾಡಿ

ಬಳ್ಳಾರಿ, ಏ.23-ಭಿನ್ನಾಭಿಪ್ರಾಯಗಳು ಎಲ್ಲಾ ಪಕ್ಷಗಳಲ್ಲೂ ಸಾಮಾನ್ಯವಾಗಿ ಇದ್ದೇ ಇರುತ್ತದೆ. ಹಾಗೆಯೇ ನಮ್ಮ ಪಕ್ಷದಲ್ಲೂ ಕೆಲವು ಭಿನ್ನಾಭಿಪ್ರಾಯಗಳಿವೆ. ಇದನ್ನೆಲ್ಲ ನಮ್ಮ ವರಿಷ್ಠರು ಸರಿಪಡಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಬಳ್ಳಾರಿ ಗ್ರಾಮಾಂತರ ಶಾಸಕ ನಾಗೇಂದ್ರ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಪಕ್ಷಗಳಲ್ಲಿರುವಂತೆ ನಮ್ಮಲ್ಲೂ ಭಿನ್ನಾಭಿಪ್ರಾಯ ಇದೆ. ನಮ್ಮಲ್ಲಿ ಏನೇ ಸಮಸ್ಯೆ ಇದ್ದರೂ ನಾನು ಪಕ್ಷ ಬಿಟ್ಟು ಎಲ್ಲೂ ಹೋಗಿಲ್ಲ ಎಂದು ಸ್ಪಷ್ಟಪಡಿಸಿದರು.

ರಮೇಶ್ ಜಾರಕಿ ಹೊಳಿ ಪಕ್ಷ ತೊರೆಯುತ್ತಾರಂತಲ್ಲ? ಎಂಬ ವರದಿಗಾರರ ಪ್ರಶ್ನೆಗೆ ಈ ಬಗ್ಗೆ ನನಗೆ ಗೊತ್ತಿಲ್ಲ. ನಾನು ಪಕ್ಷದಲ್ಲೇ ಇದ್ದೇನೆ. ಸಮಸ್ಯೆ ಇಲ್ಲವೆಂದಲ್ಲ, ಅದನ್ನು ನಮ್ಮ ಪಕ್ಷದ ವರಿಷ್ಠರು ಸರಿಪಡಿಸುತ್ತಾರೆ. ಆ ಬಗ್ಗೆ ನನಗೆ ವಿಶ್ವಾಸವಿದೆ ಎಂದು ಹೇಳಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ