ಕಾರ್ಮಿಕರಿಗೆ ಉದ್ಯೋಗ ಸಿಕ್ಕಿದ್ದು ಸಂತಸ ತಂದಿದೆ : ರೇಣುಕಾಚಾರ್ಯ

ಈ ಸುದ್ದಿಯನ್ನು ಶೇರ್ ಮಾಡಿ

ದಾವಣಗೆರೆ, ಮೇ 27- ಹೊನ್ನಾಳಿ ತಾಲೂಕಿನ ಹನುಮಸಾಗರ ತಾಂಡದ ಕೆರೆಯಲ್ಲಿ ಸುಮಾರು 9 .90 ಲಕ್ಷ ರೂ. ವೆಚ್ಚದಲ್ಲಿ ಕೆರೆ ಹೂಳೆತ್ತಲು ಯೋಜನೆ ರೂಪಿಸಿದ್ದು, ಇದರಿಂದ 210 ಜನ ಕಾರ್ಮಿಕರಿಗೆ ಉದ್ಯೋಗ ಸಿಕ್ಕಂತಾಗಿದೆ ಎಂದು ಸಿಎಂ ಆಪ್ತ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹರ್ಷ ವ್ಯಕ್ತಪಡಿಸಿದ್ದಾರೆ.

ಮಹತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಹೊನ್ನಾಳಿ ತಾಲೂಕಿನ ಹನುಮಸಾಗರ ತಾಂಡದ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಹೋರಾಟದ ಫಲವಾಗಿ ಚೆಕ್ ಡ್ಯಾಮï ನಿರ್ಮಾಣವಾಗಿದ್ದು, ಇದೀಗ ಅದೇ ಕೆರೆಯಲ್ಲಿ ಉದ್ಯೋಗ ಖಾತ್ರಿ ಕೆಲಸ ನೀಡಿದ್ದು ಸಂತಸ ತಂದಿದೆ ಎಂದಿದ್ದಾರೆ. ಕೋವಿಡ್-19 ಸೋಂಕು ಹಿನ್ನೆಲೆಯಲ್ಲಿ ಕೂಲಿ ಕಾರ್ಮಿಕರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕೆಂದು ಇದೇ ವೇಳೆ ಅವರು ಸೂಚಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರು 249 ರೂ. ಇದ್ದ ದಿನಗೂಲಿಯನ್ನು 275 ರೂಗೆ ಹೆಚ್ಚಳ ಮಾಡಿದ್ದಾರೆ. ಮುಖ್ಯಮಂತ್ರಿಗಳು ದುಡಿಯುವ ಕೈಗಳಿಗೆ ಬಲ ನೀಡಿದ್ದು, ಕೂಲಿ ಕಾರ್ಮಿಕರು ಉದ್ಯೋಗ ಖಾತ್ರಿಯ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.

Facebook Comments