ದೇವರಹಿಪ್ಪರಿಗೆ ಶಾಸಕ ಸೋಮನಗೌಡ ಪಾಟೀಲರಿಗೆ ಕೊರೊನಾ

ಈ ಸುದ್ದಿಯನ್ನು ಶೇರ್ ಮಾಡಿ

ವಿಜಯಪುರ, ಆ.16- ದೇವರ ಹಿಪ್ಪರಿಗೆ ಕ್ಷೇತ್ರದ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ ಸಾಸನೂರು ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಕಳೆದ ಆ.13ರಂದು ಆರೋಗ್ಯ ತಪಾಸಣೆಗೆ ಒಳಪಟ್ಟಿದ್ದ ಅವರು ಬೆಂಗಳೂರಿಗೆ ತೆರಳಿದ್ದರು. ಕಳೆದ ರಾತ್ರಿ ಕೋವಿಡ್ ಪರೀಕ್ಷೆಯ ವರದಿ ಬಂದಿತ್ತು. ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢ ಪಟ್ಟಿದೆ.

ಬೆಂಗಳೂರಿನ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯು ತ್ತಿದ್ದು , ಆರೋಗ್ಯದಲ್ಲಿ ಯಾವುದೇ ತೊಂದರೆ ಇಲ್ಲ . ಯಾರೂ ಆತಂಕ ಪಡಬೇಕಾ ಗಿಲ್ಲ ಎಂದು ಟ್ವಿಟ್ ಮಾಡಿದ್ದಾರೆ. ಬೇಗನೆ ಗುಣಮುಖರಾಗಿ ಕ್ಷೇತ್ರಕ್ಕೆ ಮರಳುತ್ತೇನೆ. ನನ್ನ ಸಂಪರ್ಕದಲ್ಲಿ ಇದ್ದವರು ಕೂಡಲೇ ತಪಾಸಣೆ ಮಾಡಿಸಿಕೊಳ್ಳಿ ಎಂದು ಅವರು ಮನವಿ ಮಾಡಿದ್ದಾರೆ.

# ಕೊರೊನಾಗೆ ನಗರಸಭೆ ಸದಸ್ಯ ಬಲಿ : 
ಕೋವಿಡ್ ಸೋಂಕಿನಿಂದಾಗಿ ನಗರಸಭೆ ಸದಸ್ಯರೊಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ನಡೆದಿದೆ.ಮೃತ ವ್ಯಕ್ತಿಯು 40 ವರ್ಷದವರಾಗಿದ್ದು, ಹಿರಿಯೂರು ನಗರಸಭೆಯ ಕಾಂಗ್ರೆಸ್ ಸದಸ್ಯರಾಗಿದ್ದರು.

ಮೃತ ಸದಸ್ಯ ಆ.7ರಂದು ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ರಾತ್ರಿ ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗದಿಂದ ಬೆಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.

ಮೃತರು ಕಳೆದ ಬಾರಿ ಪಕ್ಷೇತರರಾಗಿ ಗೆದ್ದು ಉತ್ತಮ ಸೇವೆ ಮಾಡಿದ್ದರು.
ಈ ಬಾರಿ ಕಾಂಗ್ರೆಸ್‍ನಿಂದ ಟಿಕೆಟ್ ಪಡೆದು ಎರಡನೇ ಬಾರಿ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು.

ಸರಳತೆಯಿಂದ ಎಲ್ಲರ ಸ್ನೇಹಗಳಿಸಿ, ಸ್ನೇಹ ಜೀವಿ ಎನ್ನಿಸಿದ್ದ ಇವರು ವಾರ್ಡ್‍ನಲ್ಲಿ ಅಪಾರ ಸೇವೆ ಮಾಡಬೇಕೆಂದುಕೊಂಡಿದ್ದರು. ಆದರೆ, ಕೊರೊನಾಗೆ ಬಲಿಯಾಗಿದ್ದಾರೆ.

Facebook Comments

Sri Raghav

Admin