ಶ್ರೀರಾಮುಲುಗೆ ಡಿಸಿಎಂ ಸ್ಥಾನ ನೀಡಲು ಸೋಮಶೇಖರ್ ರೆಡ್ಡಿ ಒತ್ತಾಯ

ಈ ಸುದ್ದಿಯನ್ನು ಶೇರ್ ಮಾಡಿ

ಬಳ್ಳಾರಿ :  ಶ್ರೀರಾಮುಲು ಅವರನ್ನು ಉಪಮುಖ್ಯಮಂತ್ರಿ ಮಾಡಬೇಕೆಂದು ಶಾಸಕ ಸೋಮಶೇಖರ್ ರೆಡ್ಡಿ ಒತ್ತಾಯಿಸಿದ್ದಾರೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಶ್ರೀರಾಮುಲು ಅವರನ್ನು ಉಪ ಮುಖ್ಯಮಂತ್ರಿ ಮಾಡುವುದಾಗಿ ಭರವಸೆ ನೀಡಲಾಗಿತ್ತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ಡಿಸಿಎಂ ಮಾಡುವ ಆಶ್ವಾಸನೆ ನೀಡಿದ್ದರು.

ಈಗ ಉಪಮುಖ್ಯಮಂತ್ರಿ ಮಾಡದಿರುವುದಕ್ಕೆ ಮನಸ್ಸಿಗೆ ನೋವಾಗಿದೆ ಎಂದು ಹೇಳಿದ್ದಾರೆ. ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕರಾದ ಶ್ರೀರಾಮುಲು ಅವರನ್ನು ಡಿಸಿಎಂ ಮಾಡಿ ಬಳ್ಳಾರಿ ಜಿಲ್ಲೆ ಉಸ್ತುವಾರಿ ಮಾಡಬೇಕೆಂದು ಅವರು ಆಗ್ರಹಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಶ್ರೀರಾಮುಲು ಅವರು, ಪಕ್ಷದ ವರಿಷ್ಠರಿಂದ ಉಪಮುಖ್ಯಮಂತ್ರಿ ಮಾಡುವ ಭರವಸೆ ಸಿಕ್ಕಿತ್ತು. ಮಠಾಧೀಶರು ಹಾಗೂ ಸಮುದಾಯದವರ ಆಶಯವೂ ಇದೇ ಆಗಿತ್ತು. ಆದರೆ ಈ ಸಂದರ್ಭದಲ್ಲಿ ನಾನು ಯಾವುದೇ ಒತ್ತಾಯವನ್ನೂ ಮಾಡುವುದಿಲ್ಲ ಎಂದು ಹೇಳಿದರು.

Facebook Comments