ಯಾವ ಖಾತೆ ಕೊಟ್ರು ಓಕೆ : ಶ್ರೀರಾಮುಲು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.20- ಯಾವುದೇ ಖಾತೆ ನೀಡಿದರೂ ಕಾಯಾ, ವಾಚಾ, ಮನಸಾ ಕೆಲಸ ಮಾಡುವುದಾಗಿ ನೂತನ ಸಚಿವ ಶ್ರೀರಾಮುಲು ತಿಳಿಸಿದರು.

ರಾಜಭವನದಲ್ಲಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ವಿಧಾನಸೌಧಕ್ಕೆ ಆಗಮಿಸಿದ ಅವರು, ಸುದ್ದಿಗಾರರೊಂದಿಗೆ ಮಾತನಾಡುತ್ತಾ,

ಈಗಾಗಲೇ ತಾವು ಎರಡು ಬಾರಿ ಸಚಿವರಾಗಿ ಕೆಲಸ ಮಾಡಿದ ಅನುಭವವಿದೆ. ಕಳೆದ 10 ವರ್ಷಗಳಿಂದ ಅಧಿಕಾರ ಇರಲಿಲ್ಲ. ನೂತನ ಸಚಿವರಿಗೆ ಯಾವಾಗ ಖಾತೆ ಹಂಚಿಕೆಯಾಗುತ್ತದೆ ಎಂಬುದು ಗೊತ್ತಿಲ್ಲ. ಯಾವುದೇ ಖಾತೆ ಕೊಟ್ಟರೂ ಜವಾಬ್ದಾರಿಯಿಂದ ನಿರ್ವಹಿಸುವುದಾಗಿ ಹೇಳಿದರು.

ಜನರು ನೀಡಿದ ಭಿಕ್ಷೆಯಿಂದ ಈ ಸ್ಥಾನಕ್ಕೆ ಬಂದಿದ್ದೇನೆ. ಅವರ ವಿಶ್ವಾಸವನ್ನು ಉಳಿಸಿಕೊಳ್ಳುತ್ತೇನೆ ಎಂದು ಇದೇ ವೇಳೆ ಶ್ರೀರಾಮುಲು ತಿಳಿಸಿದರು. ವಿಧಾನಸೌಧ ಪ್ರವೇಶಿಸುವ ಮುನ್ನ ಶ್ರೀರಾಮು ಮೆಟ್ಟಿಲುಗಳಿಗೆ ನಮಸ್ಕರಿಸಿದರು.

Facebook Comments