ಜೆಡಿಎಸ್ ಶಾಸಕರಿಂದ ರಾಜಕೀಯ ಷಡ್ಯಂತ್ರ : ಶ್ರೀರಾಮುಲು ಆರೋಪ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.12- ಬಿಜೆಪಿ ನಾಯಕರನ್ನು ಭೇಟಿ ಮಾಡುವ ಮೂಲಕ ಜೆಡಿಎಸ್ ನಾಯಕರು ರಾಜಕೀಯ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಬಿಜೆಪಿ ಹಿರಿಯ ಶಾಸಕ ಶ್ರೀರಾಮುಲು ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಜತೆ ಯಾವುದೇ ಮಾತುಕತೆಗಳಾಗಿಲ್ಲ.

ಜೆಡಿಎಸ್‍ನ ನಾಯಕರು ಅವರಾಗಿಯೇ ಬಂದು ಬಿಜೆಪಿಯವರನ್ನು ಭೇಟಿ ಮಾಡಿದ್ದಾರೆ. ಅಷ್ಟು ದೊಡ್ಡ ದೊಡ್ಡ ನಾಯಕರಿದ್ದರೂ ಅವರು ಈ ರೀತಿಯ ರಾಜಕೀಯ ಷಡ್ಯಂತ್ರ ನಡೆಸುತ್ತಿರುವುದು ಸರಿಯಲ್ಲ ಎಂದರು.

ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ಅವರು ಕುತಂತ್ರ ಮಾಡುತ್ತಿದ್ದಾರೆ. ಗುತ್ತಿಗೆದಾರರು ಹಾಗೂ ವರ್ಗಾವಣೆಯಲ್ಲಿ ಹಣ ಮಾಡುವುದು ಅವರ ಮೂಲ ಉದ್ದೇಶವಾಗಿದೆ ಎಂದು ಆರೋಪಿಸಿದರು.

ಜನ ವಿಧಾನಸಭೆ ಚುನಾವಣೆ ಯಲ್ಲಿ ಜೆಡಿಎಸ್-ಕಾಂಗ್ರೆಸ್ ಎರಡೂ ಪಕ್ಷಗಳನ್ನು ತಿರಸ್ಕರಿಸಿ ದ್ದಾರೆ. ಬಿಜೆಪಿ ಆಡಳಿತಕ್ಕೆ ಬರಬೇಕೆಂದು 105 ಸ್ಥಾನಗಳನ್ನು ನೀಡಿದ್ದು, ಈಗ 16 ಮಂದಿ ಶಾಸಕರು ರಾಜೀನಾಮೆ ಕೊಟ್ಟಿದ್ದು, ಶಾಸಕರಿಗೆ ಮತ್ತು ಜನರಿಗೆ ಬೇಡದ ಸರ್ಕಾರ ಯಾವ ಕಾರಣಕ್ಕಾಗಿ ಮುಂದುವರೆಯಬೇಕೆಂದು ಪ್ರಶ್ನಿಸಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕುರ್ಚಿ ಖಾಲಿ ಮಾಡಬೇಕೆಂದು ಶ್ರೀರಾಮುಲು ಆಗ್ರಹಿಸಿದರು.

Facebook Comments