20ರ ನಂತರ ಸಂಪುಟ ವಿಸ್ತರಣೆ : ಶಾಸಕ ಸುಧಾಕರ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಡಿ.11- ಡಿಸೆಂಬರ್ 20ರ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಬಹುದು ಎಂದು ಶಾಸಕ ಡಾ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾರ್ಖಂಡ್‍ನಲ್ಲಿ ಚುನಾವಣೆ ಮುಗಿದ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಬಹುದು.

ರಾಜ್ಯ ವಿಧಾನಸಭೆ ಉಪ ಚುನಾವಣೆಯಲ್ಲಿ ಗೆದ್ದಿರುವ 11 ಶಾಸಕರನ್ನು ಮಂತ್ರಿ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎಂದು ಹೇಳಿದರು.
ಉಳಿದವರ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿದ ನಂತರ ಸಿಎಂ ತೀರ್ಮಾನ ಕೈಗೊಳ್ಳುತ್ತಾರೆ. ತಾವು ಉಪಮುಖ್ಯಮಂತ್ರಿ ಹುದ್ದೆ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ ಎಂದು ಹೇಳಿದರು.

Facebook Comments