ಎಸ್‍ಎಂಕೆ ಭೇಟಿ ವಿಶೇಷ ಅರ್ಥ ಬೇಡ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 26-ನಾನು ಬಿಜೆಪಿ ನಾಯಕರ ಜೊತೆ ಯಾವುದೇ ಚರ್ಚೆ ನಡೆಸಿಲ್ಲ. ಎಸ್.ಎಂ.ಕೃಷ್ಣ ಅವರು ಬಿಜೆಪಿಯಲ್ಲಿದ್ದರು ಉತ್ತಮ ಆದರ್ಶವುಳ್ಳ ವ್ಯಕ್ತಿ. ಹೀಗಾಗಿ ಅವರನ್ನು ಭೇಟಿ ಮಾಡಲು ಬಂದಿದ್ದೆ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಎಸ್.ಎಂ.ಕೃಷ್ಣ ಅವರನ್ನು ಸದಾಶಿವ ನಗರದ ಮನೆಯಲ್ಲಿ ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್.ಎಂ.ಕೃಷ್ಣ ಅವರು ನನ್ನ ರಾಜಕೀಯ ಗುರು. ಪ್ರತಿ ತಿಂಗಳೂ ಅವರನ್ನು ನಾನು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ, ಅದೇ ರೀತಿ ಈ ಬಾರಿಯೂ ಬಂದಿದ್ದೇನೆ.

ನಾನು ಎಸ್.ಎಂ.ಕೃಷ್ಣ ಅವರನ್ನು ಮಾತ್ರ ಭೇಟಿ ಮಾಡಿದ್ದೇನೆ ಹೊರತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಗಲಿ ಇನ್ಯಾವುದೇ ನಾಯಕರನ್ನು ಭೇಟಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ