ಬಿಬಿಎಂಪಿ ಚುನಾವಣೆ ನಡೆಸುವಂತೆ ಸಿಎಂ ಮೇಲೆ ಶಾಸಕರ ಒತ್ತಡ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.23- ಈಗಾಗಲೇ ಸಾಕಷ್ಟು ವಿಳಂಬವಾಗಿರುವುದರಿಂದ ವರ್ಷಾಂತ್ಯದೊಳಗೆ ಬಹುನಿರೀಕ್ಷಿತ ಬಿಬಿಎಂಪಿ ಚುನಾವಣೆ ನಡೆಸಬೇಕೆಂದು ಮುಖ್ಯಮಂತ್ರಿಗಳ ಮೇಲೆ ನಗರ ಶಾಸಕರು ಒತ್ತಡ ಹಾಕಿದ್ದಾರೆ. ಬೆಂಗಳೂರು ಪ್ರತಿನಿಸುವ ಬಿಜೆಪಿಯ ಸಚಿವರು ಮತ್ತು ಶಾಸಕರು ಗುಪ್ತವಾಗಿ ಸಭೆ ನಡೆಸಿ ಬಿಬಿಎಂಪಿ ಚುನಾವಣೆಯನ್ನು ಡಿಸೆಂಬರ್ ತಿಂಗಳೊಳಗೆ ನಡೆಸಲೇಬೇಕೆಂದು ಆಗ್ರಹಿಸಿದ್ದಾರೆ.

ನಗರ ಭಾಗದ ಸಚಿವರಾದ ವಿ.ಸೋಮಣ್ಣ, ಅಶ್ವಥ್ ನಾರಾಯಣ, ಎಸ್.ಟಿ.ಸೋಮಶೇಖರ್, ಶಾಸಕರು ಮತ್ತು ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಗಳು ಸಭೆಯಲ್ಲಿ ಭಾಗಿಯಾಗಿ ಚುನಾವಣೆ ನಡೆಸಲು ಸಿಎಂಗೆ ಮನವಿ ಮಾಡಬೇಕೆಂಬ ಒಮ್ಮತದ ನಿರ್ಣಯವನ್ನು ತೆಗೆದುಕೊಂಡಿದ್ದಾರೆ.

ಬಿಬಿಎಂಪಿಗೆ ಜನಪ್ರತಿನಿಗಳಿಲ್ಲದೆ ವರ್ಷಗಳೇ ಕಳೆದಿವೆ. ವಾರ್ಡ್ ಪುನರ್‍ವಿಂಗಡಣೆ ನೆಪದಲ್ಲಿ ಒಂದು ವರ್ಷ ಮುಂದೂಡಲಾಗಿದೆ. ನಗರದಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿದ್ದು, ಜನಪ್ರತಿನಿಗಳು ಇಲ್ಲದಿದ್ದರೆ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಅನೇಕರು ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಗೊತ್ತಾಗಿದೆ.

ನಗರದಲ್ಲಿ ಪ್ರತಿದಿನ ಒಂದಿಲ್ಲೊಂದು ಸಮಸ್ಯೆಗಳು ಎದುರಾಗುತ್ತಲೇ ಇರುತ್ತವೆ. ಪ್ರತಿಯೊಂದಕ್ಕೂ ಅಕಾರಿಗಳು ಸ್ಪಂದಿಸುವುದಿಲ್ಲ. ಪಾಲಿಕೆ ಸದಸ್ಯರಿದ್ದರೆ ಕೆಲಸಕಾರ್ಯಗಳು ಸುಲಭವಾಗಿ ನಡೆಯುತ್ತವೆ ಎಂದು ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಈಗಾಗಲೇ ವಾರ್ಡ್ ಪುನರ್ ವಿಂಗಡಣೆ ಕಾರ್ಯ ಅಂತಿಮ ಹಂತಕ್ಕೆ ಬಂದಿದೆ. ಬಿಬಿಎಂಪಿ ಗಡಿ ಗುರುತಿಸುವಿಕೆ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಚುನಾವಣೆಗೆ ಬೇಕಾದ ಸಿದ್ದತೆಗಳು ಮುಕ್ತಾಯ ಹಂತದಲ್ಲಿವೆ. ತಕ್ಷಣವೇ ಚುನಾವಣೆ ನಡೆಸಲು ಮುಖ್ಯಮಂತ್ರಿಗೆ ಮನವಿ ಮಾಡಬೇಕು. ಇನ್ನಷ್ಟು ವಿಳಂಬ ಮಾಡಿದರೆ ಪಕ್ಷಕ್ಕೆ ಹಿನ್ನಡೆಯಾಗಬಹುದೆಂಬ ಆತಂಕವನ್ನು ಸಹ ವ್ಯಕ್ತಪಡಿಸಿದ್ದಾರೆ.

# ಅಶೋಕ್ ನಡೆಗೆ ಅಸಮಾಧಾನ:
ಇನ್ನು ಸಭೆಯಲ್ಲಿ ಆರ್.ಅಶೋಕ್ ನಡೆಗೆ ಅನೇಕರು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಅವರು ಯಾರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದಿಲ್ಲ. ಏಕಪಕ್ಷೀಯವಾಗಿ ನಡೆದುಕೊಳ್ಳುತ್ತಾರೆ. ಅಲ್ಲದೆ ಬಿಬಿಎಂಪಿ ಮತ್ತು ಬಿಡಿಎ ಸೇರಿದಂತೆ ಮತ್ತಿತರ ಇಲಾಖೆಗಳ ವಿಚಾರದಲ್ಲೂ ಹಸ್ತಕ್ಷೇಪ ಮಾಡುತ್ತಾರೆ ಎಂದು ಕೆಲವು ಅಸಮಾಧಾನ ಹೊರಹಾಕಿದ್ದಾರೆ. ಈ ಹಿಂದೆ ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಒಂದು ಬಾರಿ ಅಕಾರ ನಡೆಸಿದ್ದಾರೆ. ಪುನಃ ಮತ್ತೆ ಅವರೇ ಉಸ್ತುವಾರಿಯಾಗಬೇಕೆಂದರೆ ಬೇರೆಯವರು ಆಗಬಾರದೇ? ಎಂದು ಪ್ರಶ್ನಿಸಿದ್ದಾರೆ.

# ಕೃಷ್ಣಪ್ಪ ಬದಲಾವಣೆಗೆ ಒತ್ತಾಯ:
ಕೆಂಪೇಗೌಡ ಅಭಿವೃದ್ಧಿ ಪ್ರಾಕಾರದ ಅಧ್ಯಕ್ಷರಾಗಿರುವ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ ಅವರನ್ನು ಬದಲಾಯಿಸಿ ಬೇರೊಬ್ಬರಿಗೆ ನೀಡಬೇಕೆಂಬ ಒತ್ತಾಯವು ಕೇಳಿಬಂದಿದೆ.  ಅಧ್ಯಕ್ಷರಾದ ನಂತರ ಅವರು ಸಕ್ರಿಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿಲ್ಲ.

ಅಲ್ಲದೆ ಸಮುದಾಯದ ವಿಚಾರದಲ್ಲೂ ಅಷ್ಟಕ್ಕಷ್ಟೆ.  ಕೃಷ್ಣಪ್ಪ ಅವರ ಬದಲಿಗೆ ಬೇರೊಬ್ಬರನ್ನು ಕೆಂಪೇಗೌಡ ಅಭಿವೃದ್ಧಿ ಪ್ರಾಕಾರಕ್ಕೆ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು. ಇದರಿಂದ ಪಕ್ಷಕ್ಕೂ ಅನುಕೂಲವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

Facebook Comments

Sri Raghav

Admin