ಸುನೀಲ್ ವಲ್ಯಾಪುರೆಗೆ ಸಚಿವ ಸ್ಥಾನ ನೀಡಲು ಭೋವಿ ಮಹಾಸಭಾ ಒತ್ತಾಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.30- ರಾಜ್ಯದಲ್ಲಿ ಸುಮಾರು 60 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ಭೋವಿ ಸಮುದಾಯವು ಬಿಜೆಪಿ ಪಕ್ಷಕ್ಕೆ ಮೊದಲಿನಿಂದಲೂ ಬೆಂಬಲ ನೀಡುತ್ತಲೇ ಬಂದಿದೆ. ಸರಳ ಸಜ್ಜನಿಕೆಯ ಹಾಲಿ ವಿಧಾನ ಪರಿಷತ್ ಸದಸ್ಯ ಸುನೀಲ್ ವಲ್ಯಾಪುರೆ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಬಿಜೆಪಿ ವರಿಷ್ಠರಲ್ಲಿ ಕರ್ನಾಟಕ ಭೋವಿ(ವಡ್ಡರ) ಮಹಾಸಭಾ ಕಾರ್ಯಾಧ್ಯಕ್ಷ ರಾಘವೇಂದ್ರ ಅವರು ಮನವಿ ಮಾಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ಬಾರಿ ಶಾಸಕರಾಗಿ ಒಂದು ಬಾರಿ ಸಚಿವರಾಗಿ ಉತ್ತಮ ಕೆಲಸ ಮಾಡುವುದರ ಜೊತೆಗೆ ಅನುಭವವುಳ್ಳವರಾಗಿದ್ದಾರೆ. ಪಕ್ಷದಲ್ಲಿ ನಿಷ್ಠಾವಂತ ಸೇವೆ, ಅಪಾರ ಜನಪರ ಕಾಳಜಿ ಇರುವ ತ್ಯಾಗ ಮನೋಭವಿರುವ ಸುನೀಲ್ ವಲ್ಯಾಪುರೆ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಭೋವಿ ಸಮಾಜದ ಅಧ್ಯಕ್ಷ ತಿಪ್ಪಣ್ಣ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಕಂದಗಲ್, ಪದ್ಮಾ, ಈರಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Facebook Comments