ಇಬ್ಬರು ಮೊಬೈಲ್ ಕಳ್ಳರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.23- ಮೊಬೈಲ್‍ಗಳನ್ನು ಕಳವು ಮಾಡುತ್ತಿದ್ದ ಇಬ್ಬರನ್ನು ರಾಮಮೂರ್ತಿನಗರ ಠಾಣೆ vಲೀಸರು ಬಂಸಿ 2 ಲಕ್ಷ ಮೌಲ್ಯದ 15 ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಸಂತೋಷ್‍ಕುಮಾರ್ (28) ಮತ್ತು ಡಿಕ್ಸನ್ ಮೋಹನ್‍ದಾಸ್ (27) ಬಂತ ಆರೋಪಿಗಳು.

ಇವರಿಬ್ಬರಿಂದ ಕಳವು ಪ್ರಕರಣಗಳಿಗೆ ಸಂಬಂಸಿದಂತೆ 2 ಲಕ್ಷ ರೂ. ಮೌಲ್ಯದ 15 ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ನಗರದಲ್ಲಿ ಮೊಬೈಲ್ ಕಳವು ಪ್ರಕರಣಗಳು ಹೆಚ್ಚಾಗುತ್ತಿದ್ದ ಬಗ್ಗೆ ತನಿಖೆ ಕೈಗೊಂಡಿದ್ದ vಲೀಸರು ಇಬ್ಬರನ್ನು ಬಂಸುವಲ್ಲಿ ಯಶಸ್ವಿಯಾಗಿದ್ದಾರೆ.

ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತ ಡಾ.ಶರಣಪ್ಪ ಮಾರ್ಗದರ್ಶನದಲ್ಲಿ ಬಾಣಸವಾಡಿ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ನಿಂಗಪ್ಪ ನೇತೃತ್ವದಲ್ಲಿ ಇನ್ಸ್ ಪೆಕ್ಟರ್ ಮೆಲ್ವಿನ್ ಫ್ರಾನ್ಸಿಸ್ ಅವರನ್ನೊಳಗೊಂಡ ತಂಡ ಆರೋಪಿಗಳನ್ನು ಬಂಸಿ ಮಾಲು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

Facebook Comments