ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಪ್ರಧಾನಿ ಮೋದಿಗೆ ಅಭಿನಂದನೆಗಳ ಮಹಾಪೂರ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಸೆ.17-ಎಪ್ಪತೊಂದನೆ ವರ್ಷಕ್ಕೆ ಪದಾರ್ಪಣೆ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ರಾಷ್ಟ್ರಪತಿ ರಮಾನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಟಿಬೆಟ್ ಧರ್ಮಗುರು ದಲೈಲಾಮಾ ಸೇರಿದಂತೆ ಹಲವಾರು ಮಹನಿಯರು ಶುಭ ಕೋರಿದ್ದಾರೆ. ದೇಶಸೇವೆಗೆ ತಮ್ಮ ಜೀವವನ್ನು ಮುಡಿಪಾಗಿಟ್ಟಿರುವ ಮೋದಿ ಅವರಿಗೆ ದೇವರು ಆರೋಗ್ಯ ನೀಡಲಿ ಎಂದು ಕೋವಿಂದ್ ಹಾರೈಸಿದ್ದಾರೆ.

ಅದೇ ರೀತಿ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಹಾಗೂ ದಲೈಲಾಮಾ ಅವರು ಶುಭ ಕೋರಿ ಮೋದಿ ಮಾರ್ಗದರ್ಶನದಲ್ಲಿ ದೇಶ ಮತ್ತಷ್ಟು ಪ್ರಗತಿ ಸಾಧಿಸಲಿ ಎಂದು ಆರಸಿದ್ದಾರೆ.ಕೇಂದ್ರ ಗೃಹಸಚಿವ ಅಮಿತ್ ಶಾ ಅವರು, ಮೋದಿ ಆಡಳಿತದಲ್ಲಿ ಹಲವಾರು ದಶಕಗಳಿಂದ ತಮ್ಮ ಹಕ್ಕುಗಳನ್ನು ಕಳೆದುಕೊಂಡಿದ್ದವರು ಗೌರವಯುತ ಜೀವನ ಸಾಗಿಸುವಂತಾಗಿದೆ ಎಂದು ಬಣ್ಣಿಸಿದ್ದಾರೆ.

ರಕ್ಷಣಾ ಸಚಿವ ರಾಜ್‍ನಾಥ್‍ಸಿಂಗ್ ಮತ್ತಿತರ ಬಿಜೆಪಿ ಮುಖಂಡರುಗಳು, ಗಣ್ಯರು, ಪ್ರತಿಪಕ್ಷಗಳ ನಾಯಕರು ಮೋದಿ ಅವರಿಗೆ ಶುಭಾಷಯ ಕೋರಿದ್ದಾರೆ.

Facebook Comments