ಅಮ್ಮನ ಆಶೀರ್ವಾದ ಪಡೆದ ಹೆಮ್ಮೆಯ ಮಗ ಮೋದಿ….!

ಈ ಸುದ್ದಿಯನ್ನು ಶೇರ್ ಮಾಡಿ

ಅಹಮದಾಬಾದ್‌, ಮೇ 27-  : ಲೋಕಸಭಾ ಚುನಾವಣೆಯಲ್ಲಿ ಪ್ರಚಂಡ ಜಯಭೇರಿ ಬಾರಿಸಿದ ಬಳಿಕ ಮೊದಲ ಬಾರಿ ತವರು ರಾಜ್ಯ ಗುಜರಾತ್‌ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಮತದಾರರಿಗೆ ಧನ್ಯವಾದ ಅರ್ಪಿಸಿದರಲ್ಲದೇ, ತಮ್ಮ ತಾಯಿ ಹೀರಾಬೆನ್‌ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ನರೇಂದ್ರ ಮೋದಿ ನಿನ್ನೆ ಗುಜರಾತ್‍ಗೆ ತೆರಳಿ ತಾಯಿ ಹೀರಾ ಬೆನ್ ಅವರ ಆಶೀರ್ವಾದ ಪಡೆದು ಎರಡನೇ ಬಾರಿ ಪ್ರಧಾನಮಂತ್ರಿಯಾಗಿ ಪಟ್ಟಾಭಿಷೇಕಕ್ಕೆ ಸಜ್ಜಾಗಿದ್ದಾರೆ.

ಎಲ್ಲ ಮಹತ್ವದ ಸಂದರ್ಭಗಳಲ್ಲಿ ಮೋದಿ ತಾಯಿಯ ಆಶೀರ್ವಾದ ಪಡೆದೇ ಮುಂದಿನ ಕಾರ್ಯಕ್ಕೆ ಅಣಿಯಾಗುತ್ತಾರೆ. ಮೋದಿ ದೇಶಕ್ಕೇ ಪ್ರಧಾನಮಂತ್ರಿಯಾದಗೂ ತಾಯಿಗೆ ಮುದ್ದಿನ ಮಗ ಮೋದಿ .

ಅವರು ಶಾಸಕರಾಗಿ, ಮುಖ್ಯಮಂತ್ರಿಯಾಗಿ ಮತ್ತು ಪ್ರಧಾನಮಂತ್ರಿ ಹುದ್ದೆ ಅಲಂಕರಿಸುವುದಕ್ಕೂ ಮುನ್ನ ಮಾತೆಯ ಮಮತೆಯ ಆಶೀರ್ವಾದ ಪಡೆಯುವುದನ್ನು ಸಂಪ್ರದಾಯವನ್ನಾಗಿ ಮುಂದುವರಿಸಿಕೊಂಡು ಬಂದಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಪ್ರಚಂಡ ಗೆಲುವು ಸಾಧಿಸಿ ಕೇಂದ್ರದಲ್ಲಿ ಎರಡನೇ ಬಾರಿ ಅಧಿಕಾರಕ್ಕೆ ಬರಲಿದ್ದು, ಮತ್ತೊಮ್ಮೆ ಪ್ರಧಾನಮಂತ್ರಿಯಾಗಲಿರುವ ಮೋದಿ ಗುಜರಾತ್ ಭೇಟಿ ನಂತರ ಇಂದು ಕಾಶಿಗೆ ತೆರಳಿ ನೀಡಿ ಕಾಶಿನಾಥನ ದರ್ಶನ ಪಡೆದು ವಿಶೇಷ ಪೂಜೆ ಸಮರ್ಪಿಸಲಿದ್ದಾರೆ.

ಬಳಿಕ ವಾರಾಣಾಸಿಯಲ್ಲಿ ಮತದಾರರಿಗೆ ಕೃತಜ್ಞತೆ ಸಲ್ಲಿಸುವರು. ವಾರಾಣಾಸಿ ಲೋಕಸಭಾ ಕ್ಷೇತ್ರದಲ್ಲಿ ಮೋದಿ 4.79 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಭರ್ಜರಿ ಜಯ ದಾಖಲಿಸಿದ್ದಾರೆ.

ಮೇ 30ರಂದು ಸಂಜೆ 5 ಗಂಟೆಗೆ ಮೋದಿ ಭಾರತದ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಾರ್ಕ್ ರಾಷ್ಟ್ರಗಳ ಮುಖ್ಯಸ್ಥರು, ವಿವಿಧ ದೇಶಗಳ ಅಧಿಪತಿಗಳು ಸೇರಿದಂತೆ ಖ್ಯಾತನಾಮರು ಈ ಸಮಾರಂಭದಲ್ಲಿ ಭಾಗವಹಿಸುವರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin