ಪ್ರಧಾನಿ ಮೋದಿ ಕಾರ್ಯದರ್ಶಿಯಾಗಿ ನೃಪೇಂದ್ರ ಮಿಶ್ರಾ ಮರುನೇಮಕ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಜೂ.12- ನಿರೀಕ್ಷೆಯಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ನಿವೃತ್ತ ಐಎಎಸ್ ಅಧಿಕಾರಿ ನೃಪೇಂದ್ರ ಮಿಶ್ರಾ ಅವರು ನೇಮಕಗೊಂಡಿದ್ದಾರೆ.

ಪ್ರಧಾನ ಮಂತ್ರಿಗಳ ಹೆಚ್ಚುವರಿ ಕಾರ್ಯದರ್ಶಿಯನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಡಾ.ಪಿ.ಕೆ.ಮಿಶ್ರಾ ನೇಮಕ ಇಬ್ಬರೂ ಅಧಿಕಾರಿಗಳಿಗೂ ಈ ಬಾರಿ ಕ್ಯಾಬಿನೆಟ್ ಸ್ಥಾನಮಾನ ನೀಡಲಾಗಿದೆ. ಇಬ್ಬರೂ ಐದು ವರ್ಷಗಳ ಅವಧಿಗೆ ಅವರು ಮರುನೇಮಕಗೊಂಡಿದ್ದಾರೆ. ನೇಮಕಾತಿಗಳ ಸಂಪುಟ ಸಮಿತಿ ಈ ಕ್ರಮ ಕೈಗೊಂಡಿದ್ದು, ಮೇ 31ರಿಂದಲೇ ಜಾರಿಗೆ ಬರುವಂತೆ ಈ ಆದೇಶ ಹೊರಡಿಸಲಾಗಿದೆ.

ಈ ಹಿಂದೆ ಕೇಂದ್ರ ಸರ್ಕಾರ ಈ ಹಿಂದಿನ ಎನ್‍ಡಿಎ ಸರ್ಕಾರದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿದ್ದ ಅಜಿತ್ ಧೋವಲ್ ರನ್ನೂ ಕೂಡ ಮುಂದಿನ ಐದು ವರ್ಷಗಳಿಗೆ ಮರು ನೇಮಕ ಮಾಡಿಕೊಂಡಿದ್ದಲ್ಲದೇ ಅವರಿಗೂ ಕ್ಯಾಬಿನೆಟ್ ಸ್ಥಾನಮಾನ ನೀಡಿತ್ತು.

ಆ ಮೂಲಕ ಧೋವಲ್ ಸತತ ಎರಡನೇ ಬಾರಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಆಯ್ಕೆಯಾದ ಮೊದಲ ಅಧಿಕಾರಿ ಎಂಬ ಕೀರ್ತಿಗೆ ಭಾಜನರಾಗಿದ್ದಾ. ಕಳೆದ ಸರ್ಕಾರದಲ್ಲಿ ಧೋವಲ್ ಅವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಲಾಗಿತ್ತು.

ಇದೇ ವೇಳೆ ಸಂಪುಟ ಕಾರ್ಯದರ್ಶಿ ಪಿಕೆ ಸಿನ್ಹಾ ಅವರ ಅಧಿಕಾರಾವಧಿಯನ್ನು ಕೇಂದ್ರ ಸರ್ಕಾರ ಮತ್ತೆ 3 ತಿಂಗಳುಗಳ ಕಾಲ ಹೆಚ್ಚಿಸಿದ್ದು, ಇದಕ್ಕಾಗಿ ನಿಯಮಗಳಲ್ಲಿ ಕೆಲ ಬದಲಾವಣೆ ತಂದಿದೆ. ಆ ಮೂಲಕ 60 ವರ್ಷದ ಪಿಕೆ ಸಿನ್ಹಾ ಅವರ ಅಧಿಕಾರಾವಧಿ ಇನ್ನೂ ಮೂರು ತಿಂಗಳುಗಳಿಗೆ ಹೆಚ್ಚಳವಾದಂತಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ