ಸ್ತ್ರೀಯರ ವಿವಾಹದ ಕನಿಷ್ಠ ವಯೋಮಿತಿ ಪರಿಶೀಲನೆ : ಪ್ರಧಾನಿ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಆ.15-ಸ್ತ್ರೀಯರ ವಿವಾಹದ ಕನಿಷ್ಠ ವಯೋಮಿತಿ ಮರುಪರಿಶೀಲಿಸಲು ಈಗಾಗಲೇ ಸಮಿತಿಯನ್ನು ರಚಿಸಲಾಗಿದ್ದು, ಸಮಿತಿ ತನ್ನ ವರದಿಯನ್ನು ಸಲ್ಲಿಸಿದ ಬಳಿಕ ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ.

74ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ರಾಜಧಾನಿ ದೆಹಲಿಯ ಕೆಂಪುಕೋಟೆಯಲ್ಲಿ ಇಂದು ಬೆಳಗ್ಗೆ ರಾಷ್ಟ್ರೀಯ ತ್ರಿವರ್ಣ ದ್ವಜಾರೋಹಣ ನೆರವೇರಿಸಿ ಪ್ರಧಾನಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದರು.
ಮಹಿಳೆಯರಿಗೆ ಅವಕಾಶ ಸಿಕ್ಕಾಗಲೆಲ್ಲಾ ಭಾರತ ಹೆಮ್ಮೆ ಪಡುವಂತೆ ಮಾಡುತ್ತಿದ್ದಾರೆ.

ಈ ಮೂಲಕ ಭಾರತವನ್ನು ಬಲಪಡಿಸುವ ಕೆಲಸ ಮಾಡುತ್ತಿದ್ದಾರೆ. ಇಂದು, ದೇಶವು ಅವರಿಗೆ ಸ್ವಯಂ ಉದ್ಯೋಗ ಮತ್ತು ಉದ್ಯೋಗದ ಸಮಾನ ಅವಕಾಶಗಳನ್ನು ನೀಡುತ್ತಿದೆ.

ದೇಶದಲ್ಲಿಂದು ಮಹಿಳೆಯರು ಕಲ್ಲಿದ್ದಲು ಗಣಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ, ನಮ್ಮ ದೇಶದ ಹೆಣ್ಣುಮಕ್ಕಳು ಯುದ್ಧ ವಿಮಾನವನ್ನು ಹಾರಿಸುವಾಗ ಆಗಸ ಮುಟ್ಟುತ್ತಿದ್ದಾರೆ ಎಂದು ಪ್ರಧಾನಿ ಪ್ರಶಂಸಿಸಿದರು.

Facebook Comments

Sri Raghav

Admin