ಮುಂದಿನ ವಾರ ರುವಾಂಡ, ಉಗಾಂಡ, ದಕ್ಷಿಣ ಆಫ್ರಿಕಾಕ್ಕೆ ಪ್ರಧಾನಿ ಭೇಟಿ

ಈ ಸುದ್ದಿಯನ್ನು ಶೇರ್ ಮಾಡಿ

Modi-Edi--01
ನವದೆಹಲಿ, ಜು.20-ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ವಾರ ಮೂರು ರಾಷ್ಟ್ರಗಳಿಗೆ ಭೇಟಿ ನೀಡಲಿದ್ದಾರೆ. ಜು.23 ರಿಂದ 27ರವರೆಗೆ ಅವರು ರುವಾಂಡ, ಉಗಾಂಡ ಮತ್ತು ದಕ್ಷಿಣ ಆಫ್ರಿಕಾ ದೇಶಗಳಲ್ಲಿ ಅಧಿಕೃತ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇಂದು ಪ್ರಕಟಿಸಿದೆ.

ಈ ಭೇಟಿ ವೇಳೆ ಮೋದಿ ಅವರು ದಕ್ಷಿಣ ಆಫ್ರಿಕಾದಲ್ಲಿ ನಡೆಯುವ ಬ್ರಿಕ್ಸ್ (ಬ್ರೆಜಿಲ್, ರಷ್ಯಾ, ಇಂಡಿಯಾ, ಚೀನಾ ಮತ್ತು ಸೌತ್ ಆಫ್ರಿಕಾ ದೇಶಗಳ ಸಮೂಹ) ಸಮಾವೇಶದಲ್ಲಿ ಭಾಗವಹಿಸುವರು. ಈ ಮೂರು ರಾಷ್ಟ್ರಗಳ ಭೇಟಿ ವೇಳೆ ಪ್ರಧಾನಿ ಮೋದಿ ಉನ್ನತ ನಾಯಕರೊಂದಿಗೆ ಅನೇಕ ಮಹತ್ವದ ವಿಷಯಗಳ ಬಗ್ಗೆ ಚರ್ಚಿಸಲಿದ್ದು, ಹಲವಾರು ಕ್ಷೇತ್ರಗಳಲ್ಲಿ ಒಪ್ಪಂದಗಳಿಗೆ ಸಹಿ ಹಾಕುವ ನಿರೀಕ್ಷೆ ಇದೆ.

Facebook Comments

Sri Raghav

Admin