ಆಂದ್ರಕ್ಕೆ ಕೇಂದ್ರದ ಪೂರ್ಣ ಸಹಕಾರ : ಜಗನ್‍ಗೆ ಮೋದಿ ಭರವಸೆ

ಈ ಸುದ್ದಿಯನ್ನು ಶೇರ್ ಮಾಡಿ

ತಿರುಪತಿ, ಜೂ. 10- ಆಂದ್ರಪ್ರದೇಶದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ವೈಎಸ್‍ಆರ್ ಕಾಂಗ್ರೆಸ್ ಸರ್ಕಾರಕ್ಕೆ ಕೇಂದ್ರದಿಂದ ಸಂಪೂರ್ಣ ಸಹಕಾರ ಲಭಿಸಲಿದೆ ಎಂದು ಆಶ್ವಾಸನೆ ನೀಡಿದ್ದಾರೆ.

ಕೇಂದ್ರ ಹಾಗೂ ರಾಜ್ಯದಲ್ಲಿ ಸ್ಪಷ್ಟ ಬಹುಮತ ಇರುವ ಸರ್ಕಾರ ರಚನೆಯಾಗಿದ್ದು, ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ನೇತೃತ್ವದಲ್ಲಿ ಆಂಧ್ರಪ್ರದೇಶ ಅಭಿವೃದ್ಧಿ ಪಥದಲ್ಲಿ ಸಾಗಲಿದೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಿನ್ನೆ ಆಂಧ್ರಪ್ರದೇಶದ ತಿರುಪತಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಆಂಧ್ರಪ್ರದೇಶದ ಅಭಿವೃದ್ಧಿಗೆ ವಿಫುಲ ಅವಕಾಶಗಳಿವೆ, ಆಂಧ್ರಪ್ರದೇಶಕ್ಕೆ ಕೇಂದ್ರ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಹೇಳಿದರು.

ಜಗನ್ ಮೋಹನ್ ರೆಡ್ಡಿ ನಾಯಕತ್ವದಲ್ಲಿ ಆಂಧ್ರಪ್ರದೇಶ ಹೊಸ ರಾಜ್ಯವಾಗುವ ನಿಟ್ಟಿನಲ್ಲಿ ಬೆಳೆಯಲಿದೆ. ಕೇಂದ್ರ ಹಾಗೂ ರಾಜ್ಯಗಳು ಒಟ್ಟಿಗೆ ಕೆಲಸ ಮಾಡಬೇಕು, ಆಗ ಹೊಸ ಭಾರತದ ನಿರ್ಮಾಣ ಸಾಧ್ಯ ಎಂದು ಮೋದಿ ತಿಳಿಸಿದರು.

ಜಗನ್ ಮೋಹನ್ ರೆಡ್ಡಿ ಇತ್ತೀಚೆಗೆ ಪ್ರಧಾನಿ ಅವರನ್ನು ಭೇಟಿ ಮಾಡಿ ಆಂಧ್ರಪ್ರದೇಶಕ್ಕೆ ಸೂಕ್ತ ಸ್ಥಾನಮಾನ ಮತ್ತು ವಿಶೇಷ ಪ್ಯಾಕೇಜ್ ನೀಡುವಂತೆ ಮನವಿ ಮಾಡಿದ್ದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ