ಹುಟ್ಟುಹಬ್ಬದ ಸಂಭ್ರಮದಲ್ಲಿ ಆರ್‌ಎಸ್‌ಎಸ್ ಸರಸಂಚಾಲಕ ಮೋಹನ್ ಭಾಗವತ್‍

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಸೆ.11- ರಾಷ್ಟ್ರೀಯ ಸ್ವಯಂ ಸೇವಾ ಸಂಘಟನೆ(ಆರ್‍ಎಸ್‍ಎಸ್) ಸರಸಂಚಾಲಕ ಮೋಹನ್ ಭಾಗವತ್‍ಗೆ ಇಂದು ಹುಟ್ಟುಹಬ್ಬದ ಸಂಭ್ರಮ.  ಈ ಹಿನ್ನೆಲೆಯಲ್ಲಿ ಅವರಿಗೆ ಪ್ರಧಾನಿ ನರೇಂದ್ರಮೋದಿ, ಕೇಂದ್ರ ಗೃಹಸಚಿವ ಅಮಿತ್ ಷಾ , ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳೀನ್‍ಕುಮಾರ್ ಕಟೀಲ್,

ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೇರಿದಂತೆ ಅನೇಕ ಗಣ್ಯರು ಶುಭ ಕೋರಿದ್ದಾರೆ.  ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮೋಹನ್ ಭಾಗವತ್ ಅವರಿಗೆ ಶುಭ ಹಾರೈಸಿ ತಮ್ಮ ಇಡೀ ಬದುಕನ್ನೇ ರಾಷ್ಟ್ರ ಸೇವೆಗೆ ಸಮರ್ಪಿಸಿದ ಅವರಿಗೆ ಹುಟ್ಟುಹಬ್ಬದ ಶುಭಾಷಯಗಳನ್ನು ಹೇಳಿದ್ದಾರೆ.

Facebook Comments