ಮಾಜಿ ಶಾಸಕ ಮೊಯಿದ್ದೀನ್ ಭಾವಾಗೆ ಬೆದರಿಕೆ ಕರೆ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು, ಅ.20- ದೇವಸ್ಥಾನದ ಧಾರ್ಮಿಕ ಕಾರ್ಯ ಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ ಕಾಂಗ್ರೆಸ್‍ನ ಮಾಜಿ ಶಾಸಕ ಮೊಯಿದ್ದೀನ್ ಭಾವಾಗೆ ಮುಂಬೈನಿಂದ ಬೆದರಿಕೆ ಕರೆ ಬಂದಿದೆ. ಮಂಗಳೂರು ಹೊರವಲಯದ ಬಜ್ಪೆ ಸುಂಕದ ಕಟ್ಟಯ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ವಿಶೇಷ ಪೂಜೆ ಆಯೋಜಿಸಲಾಗಿತ್ತು. ಅಲ್ಲಿ ಕೊಪ್ಪರಿಗೆ ಇರುವ ಧಾರ್ಮಿಕ ಕಾರ್ಯಕ್ರಮದಲ್ಲಿ ಮೊಯಿದ್ದೀನ್ ದೇವಸ್ಥಾನದ ಆಡಳಿತ ಮಂಡಳಿ ಮೇರೆಗೆ ಭಾಗವಹಿಸಿದ್ದರು.

ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಇದ್ದಕ್ಕಿದ್ದ ಹಾಗೆ ಮುಂಬೈನಿಂದ ಬೆದರಿಕೆ ಕರೆ ಬಂದಿದ್ದು, ದೇವಸ್ಥಾನದಲ್ಲಿ ಕೊಪ್ಪರಿಗೆ ಯಾಕೆ ಇಟ್ಟಿದ್ದು ಎಂದು ಅಪರಿಚಿತ ವ್ಯಕ್ತಿ ತುಳು ಭಾಷೆಯಲ್ಲಿ ಪ್ರಶ್ನಿಸಿದ್ದಾನೆ.

ಇದು ನೆಹರು ದೇಶವಲ್ಲ, ಮೋದಿ ಅವರ ದೇಶ. ದನ ತಿಂದು ಮತ್ತೊಮ್ಮೆ ದೇವಸ್ಥಾನಕ್ಕೆ ಹೋದರೆ ಹುಷಾರ್ ಎಂದು ಬೆದರಿಕೆ ಹಾಕಿದ್ದಾನೆ ಎಂದು ಹೇಳಲಾಗಿದೆ.

Facebook Comments